ನವದೆಹಲಿ, ಫೆ.27 (DaijiworldNews/PY) : ದೆಹಲಿಯ ಜಾಮಿಯಾ ಮಿಲಿಯಾ ವಿವಿ ಆವರಣದೊಳಗೆ ನಡೆದ ಗಲಭೆ ಪ್ರಕರಣ ಹಿನ್ನೆಲೆ ದೆಹಲಿ ಹೈಕೋರ್ಟ್ ಪೊಲೀಸರು ಹಾಗೂ ದೆಹಲಿ ಸರ್ಕಾರಗಳಿಗೆ ನೋಟಿಸ್ ಜಾರಿ ಮಾಡಿದೆ.
ಈ ವಿಚಾರವಾಗಿ ವಿದ್ಯಾರ್ಥಿ ಮಹಮದ್ ಮುಸ್ತಫಾ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದು, ಪೊಲೀಸರು ವಿದ್ಯಾರ್ಥಿಗಳ ಮೇಲೆ ಹಲ್ಲೆ ನಡೆಸಿದ್ದು, ಘಟನೆಯಲ್ಲಿ ಪರಿಹಾರವಾಗಿ 1 ಕೋಟಿ ನೀಡಬೇಕು ಎಂದು ಅರ್ಜಿಯಲ್ಲಿ ತಿಳಿಸಿದ್ದಾರೆ.
ಈ ಘಟನೆಯು 2019ರ ಡಿ.15ರಂದು ನಡೆದಿದ್ದು, ಹಲವಾರು ವಾಹನಗಳು ಘಟನೆಯ ವೇಳೆ ಬೆಂಕಿಗೆ ಆಹುತಿಯಾಗಿದ್ದವು. ಪೊಲೀಸರು ಕೆಲವು ವಿದ್ಯಾರ್ಥಿಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.
ಹೈಕೋರ್ಟ್ ಗುರುವಾರ ಅರ್ಜಿ ವಿಚಾರಣೆ ನಡೆಸಿ ನೋಟಿಸ್ ಜಾರಿ ಮಾಡಿದೆ.