ಬೆಂಗಳೂರು, ಫೆ 27 (Daijiworld News/MB) : ದೆಹಲಿಯಲ್ಲಿ ನಡೆದ ಹಿಂಸಾಚಾರವನ್ನು ಖಂಡನೆ ಮಾಡಿ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯಿಂದ ರಾಜಭವನ ಎದುರು ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನಕಾರರು ತಮ್ಮ ಮನವಿಯನ್ನು ರಾಜ್ಯಪಾಲರು ಬಂದು ಸ್ವೀಕರಿಸಬೇಕೆಂದು ಒತ್ತಾಯಿಸಿದರು.
ಪ್ರತಿಭಟನೆ ತೀವ್ರಗೊಳ್ಳುತ್ತಲ್ಲಿದ್ದಂತೆ ಸುಮಾರು 50ಕ್ಕೂ ಅಧಿಕ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು.