ಗುವಾಹಟಿ, ಮಾ 2 (Daijiworld News/MSP): 12 ವರ್ಷದ ಬಾಲಕಿ ಮೇಲೆ ಅಪ್ರಾಪ್ತ ಬಾಲಕರು ಸಾಮೂಹಿಕ ಅತ್ಯಾಚಾರ ಮಾಡಿ ಬಳಿಕ ಸಂತ್ರಸ್ಥ ಬಾಲಕಿಯನ್ನು ಮರಕ್ಕೆ ನೇಣು ಹಾಕಿ ಹತ್ಯೆ ಮಾಡಿರುವ ಘಟನೆ ಅಸ್ಸಾಂನ ಬಿಸ್ವನಾಥ್ ಜಿಲ್ಲೆಯ ಗೋಹಪುರ ಪೊಲೀಸ್ ಠಾಣೆ ವ್ಯಾಪ್ತಿಯ ಚಕ್ಲಾ ಗ್ರಾಮದಲ್ಲಿ ಶುಕ್ರವಾರ ಘಟನೆ ನಡೆದಿದೆ.
ಬಾಲಕಿ ಮೇಲೆ ಅತ್ಯಾಚಾರ ಮತ್ತು ಕೊಲೆ ಮಾಡಿದ ಆರೋಪದ ಮೇಲೆ 10 ನೇ ತರಗತಿ ಬೋರ್ಡ್ ಪರೀಕ್ಷೆಗೆ ಹಾಜರಾಗಿದ್ದ ಏಳು ಬಾಲಕರನ್ನು ಭಾನುವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಗೋಹ್ಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಚಕ್ಲಾ ಗ್ರಾಮದಲ್ಲಿ ಶುಕ್ರವಾರ ಈ ಘಟನೆ ನಡೆದಿದ್ದು, ಹೈಸ್ಕೂಲ್ ಲೀವಿಂಗ್ ಸರ್ಟಿಫಿಕೇಟ್ (ಎಚ್ಎಸ್ಎಲ್ಸಿ) ಪರೀಕ್ಷೆ ನಂತರ ಪಾರ್ಟಿ ಅಯೋಜಿಸಿ ಅದೇ ನೆಪದಲ್ಲಿ ಆರೋಪಿಗಳು ಸಂತ್ರಸ್ತೆಯನ್ನು ಮನೆಗೆ ಕರೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಕೃತ್ಯದ ಬಳಿಕ ಮನೆಯ ಸಮೀಪದ ಕಾಡಿನಲ್ಲಿದ್ದ ಮರಕ್ಕೆ ನೇಣುಹಾಕಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಇನ್ನು ಬಾಲಕಿ ನಾಪತ್ತೆಯಾದ ಕುರಿತು ಬಾಲಕಿ ಪೋಷಕರು ಶೋಧ ನಡೆಸುತ್ತಿದ್ದಾಗ ಶನಿವಾರ ಬೆಳಗ್ಗೆ ಕಾಡಿನಲ್ಲಿ ಬಾಲಕಿಯ ಶನ ಪತ್ತೆಯಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.