ನವದೆಹಲಿ, ಮಾ.02 (DaijiworldNews/PY) : ಸಂಸತ್ ಪ್ರಾರಂಭಕ್ಕೂ ಮೊದಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್ ಸಂಸತ್ ಭವನದ ಆವರಣದಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದೆ
ರಾಹುಲ್ ಗಾಂಧಿ, ಶಶಿ ತರೂರ್ ಹಾಗೂ ಅಧಿರಂಜನ್ ಚೌಧರಿ ಸೇರಿದಂತೆ ಕಾಂಗ್ರೆಸ್ನ ಸಂಸದರು ಪ್ರತಿಭಟನೆ ನಡೆಸಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈಶಾನ್ಯ ದೆಹಲಿಯಲ್ಲಿ ನಡೆದ ಹಿಂಸಾಚಾರವನ್ನು ತಡೆಗಟ್ಟಲು ವಿಫಲರಾಗಿದ್ದಾರೆ. ಹಾಗಾಗಿ ಈ ಕೂಡಲೇ ಅವರು ರಾಜೀನಾಮೆ ನೀಡನೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ.
ಕೇಂದ್ರ ಸರ್ಕಾರದ ವಿರುದ್ಧ ಸಂಸತ್ ಆವರಣದಲ್ಲಿ ದೆಹಲಿ ಗಲಭೆ ವಿಚಾರವಾಗಿ ಟಿಎಂಸಿ ಮತ್ತು ಎಎಪಿ ಸಂಸದರು ಪ್ರತಿಭಟನೆ ನಡೆಸಿದರು.
ಇಂದು ಎರಡನೇ ಹಂತದ ಸಂಸತ್ ಅಧಿವೇಶನ ಪ್ರಾರಂಭವಾಗಿದ್ದು, ದೆಹಲಿ ಹಿಂಸಾಚಾರವನ್ನು ಕುರಿತು ಮೋದಿ ನೇತೃತ್ವದ ಸರ್ಕಾರವನ್ನು ಸಂಸತ್ನ ಉಭಯ ಸದನಗಳಲ್ಲಿ ವಿಪಕ್ಷಗಳು ತೀವ್ರ ತರಾಟೆಗೆ ತೆಗೆದುಕೊಳ್ಳಲಿವೆ.