ನವದೆಹಲಿ, ಮಾ.02 (DaijiworldNews/PY) : ಚುನಾವಣಾ ಆಯೋಗಕ್ಕೆ ಲೋಕಸಭಾ ಚುನಾವಣೆ ಸಂದರ್ಭ ನಕಲಿ ಪ್ರಮಾಣ ಪತ್ರ ನೀಡಿದ ಆರೋಪದ ಹಿನ್ನೆಲೆಯಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸೋಮವಾರ ಸುಪ್ರೀಂ ಕೋರ್ಟ್ ನೋಟಿಸ್ ನೀಡಿದೆ.
ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಸ್.ಎ ಬೊಬ್ಡೆ ನೇತೃತ್ವದ ತ್ರಿಸದಸ್ಯ ಪೀಠವು ಮಾಜಿ ಸಚಿವ ಎ.ಮಂಜು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ ನೋಟಿಸ್ ನೀಡಿದ್ದು, ನಾಲ್ಕು ವಾರದಲ್ಲಿ ಉತ್ತರಿಸುವಂತೆ ತಿಳಿಸಿದೆ.
ಹೈಕೋರ್ಟ್ನಲ್ಲಿ ಈ ಹಿಂದೆ ಸಲ್ಲಿಸಿದ್ದ ಎ.ಮಂಜು ಅವರು, ಪ್ರಜ್ವಲ್ ರೇವಣ್ಣ ಅವರು ಚುನಾವಣಾ ಆಯೋಗಕ್ಕೆ ನಕಲಿ ಪ್ರಮಾಣ ಪತ್ರ ಸಲ್ಲಿಸಿರುವುದಾಗಿ ಆರೋಪಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ಮಾಡಿದ ನ್ಯಾ.ಮೈಕಲ್ ಡಿ ಕುನ್ಹಾ ಪೀಠ ಪ್ರಮಾಣ ಪತ್ರ ಸಲ್ಲಿಸಲು ಎ.ಮಂಜು ಅವರಿಗೆ ತಿಳಿಸಿತ್ತು. ಆದರೆ ಪ್ರಮಾಣ ಪತ್ರ ಸಲ್ಲಿಸದ ಹಿನ್ನಲೆಯಲ್ಲಿ ಈ ಅರ್ಜಿಯನ್ನು ವಜಾ ಮಾಡಲಾಗಿತ್ತು.
ಎ.ಮಂಜು ಅವರು ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿದ್ದು, ಸುಪ್ರೀಂಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ. ಎ.ಮಂಜು ಅವರು ಪರ ವಕೀಲ ಅಶೋಕ್ ಬನ್ನಿದಿನ್ನಿ ಅವರು ವಾದ ಮಂಡಿಸಿದ್ದರು.