ನವದೆಹಲಿ, ಮಾ 3 (Daijiworld News/MSP): ಇಡೀ ಜಗತ್ತನ್ನೇ ಕಾಡುತ್ತಿರುವ ಕೊರೊನಾ ವೈರಸ್, ಬಿಟ್ಟು ಬಿಡದಂತೆ ವಿಶ್ವದ ಇತರೆಡೆಗೆ ವ್ಯಾಪಿಸುತ್ತಿದೆ. ಭಾರತದಲ್ಲೂ ಕರೋನಾ ವೈರಸ್ ಕಾಣಿಸಿಕೊಂಡಿರುವ ಹಿನ್ನಲೆಯಲ್ಲಿ ಜನತೆ ಆತಂಕಕ್ಕೀಡಾಗಿದ್ದಾರೆ. ಇನ್ನು ಕರೋನಾ ವೈರಸ್ ವಿರುದ್ದ ಹೋರಾಡಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು ಜನರು ಭಯ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.
"ಭಯಪಡುವ ಅಗತ್ಯವಿಲ್ಲ. ನಾವು ಒಟ್ಟಾಗಿ ಕೆಲಸ ಮಾಡಬೇಕಾಗಿದೆ ಭಾರತಕ್ಕೆ ಆಗಮಿಸುವ ಜನರನ್ನು ಪರೀಕ್ಷಿಸುವುದರಿಂದ ಹಿಡಿದು ತ್ವರಿತ ವೈದ್ಯಕೀಯ ಚಿಕಿತ್ಸೆ ನೀಡುವವರೆಗೆ ವಿವಿಧ ಸಚಿವಾಲಯಗಳು ಮತ್ತು ರಾಜ್ಯಗಳು ಒಟ್ಟಾಗಿ ಕಾರ್ಯನಿರ್ವಹಿಸುತ್ತಿವೆ" ಎಂದು ಅವರು ಪ್ರಧಾನಿ ಮೋದಿ ಟ್ವೀಟ್ ನಲ್ಲಿ ತಿಳಿಸಿದ್ದಾರೆ.
ಮತ್ತೊಂದು ಟ್ವೀಟ್ ನಲ್ಲಿ ಹೈ ಫೀವರ್ ಹೊಂದಿರುವ ಏಳು ಪ್ರಕರಣಗಳು ಆಗ್ರಾ ಮತ್ತು ಲಖನೌದಲ್ಲಿ ಪತ್ತೆಯಾಗಿವೆ ಮತ್ತು ಅವರನ್ನು ಪ್ರತ್ಯೇಕವಾಗಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ
ಕರೋನಾ ವೈರಸ್ ಸನ್ನದ್ಧತೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಪರಿಶೀಲನಾ ಸಭೆ ನಡೆಸಿ ಸೂಕ್ತ ನಿರ್ದೇಶನಗಳನ್ನು ನೀಡಲಾಗಿದೆ. ಇನ್ನು ದೇಶದ ಜನತೆ ಈ ಬಗ್ಗೆ ಭಯ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.