ನವದೆಹಲಿ, ಮಾ 3 (Daijiworld News/MSP): ಆತ್ಮಹತ್ಯಾ ಬಾಂಬರ್ ಅದಿಲ್ ಅಹ್ಮದ್ ದಾರ್ ನಿಗೆ ಆಶ್ರಯ ನೀಡಿ, ಪುಲ್ವಾಮಾ ಭಯೋತ್ಪಾದಕ ದಾಳಿ ಸಹಕರಿಸಿದ್ದ ಆರೋಪದ ಮೇಲೆ ಇನ್ನಿಬ್ಬರನ್ನು ರಾಷ್ಟ್ರೀಯ ತನಿಖಾ ದಳ ಮಂಗಳವಾರ ಬಂಧಿಸಿದೆ.
ಪುಲ್ವಾಮಾ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬರ್ ಗೆ ಆಶ್ರಯ ನೀಡಿದ್ದ ಒಬ್ಬ ಉಗ್ರನನ್ನು ಬೆನ್ನಲ್ಲೇ ಲೆತ್ ಪೊರಾ ಪ್ರದೇಶದಲ್ಲಿ ವಾಸಿಸುತ್ತಿದ್ದ ತಂದೆ ಹಾಗೂ ಆತನ ಪುತ್ರಿಯನ್ನು ಬಂಧಿಸಲಾಗಿದೆ ಎಂದು ರಾಷ್ಟ್ರೀಯ ತನಿಖಾ ದಳದ ಮೂಲಗಳು ತಿಳಿಸಿವೆ.
ಒಟ್ಟಾರೆ ಈ ಪ್ರಕರಣದಲ್ಲಿ ಒಟ್ಟು ಮೂವರು ಆರೋಪಿಗಳನ್ನು ಬಂಧಿಸಿದಂತಾಗಿದೆ. ಫೆಬ್ರವರಿ 28 ರಂದು ಬಾಂಬರ್ ಗೆ ಆಶ್ರಯ ನೀಡಿದ್ದ ಶಕಿರ್ ಬಷೀರ್ ಮಾಗ್ರೀ ಎಂಬ ಉಗ್ರನನ್ನು ಎನ್ ಐಎ ಬಂಧಿಸಿತ್ತು. ಮುಂದಿನ ದಿನಗಳಲ್ಲಿ ಮತ್ತಷ್ಟು ಜನರನ್ನು ಬಂಧಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ
ಜೈಷ್-ಇ- ಮೊಹ್ಮದ್ ಸಂಘಟನೆಯ ಚಟುವಟಿಕೆಗಳಲ್ಲಿ ಸಕ್ರೀಯನಾಗಿದ್ದ ಹಾಜಿಬಲ್ ನಿವಾಸಿ ಉಗ್ರ ಮಾಗ್ರೀಯನ್ನು 15 ದಿನಗಳ ಕಾಲ ಎನ್ ಐಎ ಕಸ್ಟಡಿಗೆ ಜಮ್ಮು- ಕಾಶ್ಮೀರದ ಎನ್ ಐಎ ವಿಶೇಷ ನ್ಯಾಯಾಲಯ ನೀಡಿದೆ.