ನವದೆಹಲಿ, ಮಾ 03(DaijiworldNews/SM): ವಿಶ್ವವನ್ನೇ ನಲುಗಿಸಿರುವ ಕೊರೊನಾ ವೈರಸ್ ಭಾರತಕ್ಕೂ ಎಂಟ್ರಿಕೊಟ್ಟಿದ್ದು, ದೇಶದೆಲ್ಲೆಡೆ ಭೀತಿಯನ್ನು ಹುಟ್ಟಿಸಿದೆ.
ಭಾರತದಲ್ಲೂ ಕರೋನಾ ವೈರಸ್ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.
ಭಾರತ ತುರ್ತು ಪರಿಸ್ಥಿತಿಯ ಸಮಸ್ಯೆಯನ್ನು ಎದುರಿಸುತ್ತಿರುವ ಸಂದರ್ಭದಲ್ಲಿ ಸಾಮಾಝಿಕ ಜಾಲ ತಾಣದಲ್ಲಿ ಆಟವಾಡುತ್ತಿರುವುದು ಸರಿಯಲ್ಲ. ಅದನ್ನು ಬಿಟ್ಟು, ಕೊರೊನಾ ವೈರಸ್ ಬಗ್ಗೆ ಕ್ರಮ ಕೈಗೊಳ್ಳಿ ಎಂದು ವಾಗ್ದಾಳಿ ನಡೆಸಿದ್ದಾರೆ. ಈಗಾಗಲೇ ದೇಶದಲ್ಲಿ ಎರಡು ಪ್ರಕರಣಗಳು ಕಂಡು ಬಂದ ಹಿನ್ನೆಲೆಯಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮೋದಿಯವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಕೊರೊನಾ ವೈರಸ್ ಇಡೀ ವಿಶ್ವವನ್ನೇ ನಲುಗಿಸಿದೆ. ಎಲ್ಲರೂ ಇದರ ಬಗ್ಗೆ ಎಚ್ಚರಿಕೆ ವಹಿಸುತ್ತಿದ್ದಾರೆ. ಇದರ ನಿಯಂತ್ರಣಕ್ಕೆ ಹತ್ತು ಹಲವು ಕ್ರಮಕೈಗೊಳ್ಳಲಾಗಿದೆ. ವಿಶ್ವವೇ ಇದರ ಬಗ್ಗೆ ಎಚ್ಚರ ವಹಿಸುತ್ತಿರುವಾಗ ದೇಶದ ಪ್ರಧಾನಿ ಮಾತ್ರ ಸಾಮಾಜಿಕ ಜಾಲ ತಾಣದಲ್ಲಿ ಬ್ಯುಸಿಯಾಗಿದ್ದಾರೆ. ಸಾಮಾಜಿಕ ತಾಣದ ಖಾತೆ ವಿಚಾರದಲ್ಲಿ ಕಳ್ಳಾಟವಾಡುತ್ತಿದ್ದಾರೆ. ಇದನ್ನು ಬಿಟ್ಟು ವೈರಸ್ ನಿಯಂತ್ರಣದ ಬಗ್ಗೆ ಕ್ರಮ ಕೈಗೊಳ್ಳಲಿ ಎಂದು ವಾಗ್ದಾಳಿ ನಡೆಸಿದ್ದಾರೆ.