ಬೆಂಗಳೂರು, ಮಾ. 04 (Daijiworld News/MB) : ರಾಜ್ಯದಲ್ಲಿ ಕೊರೋನಾ ವೈರಸ್ ಭೀತಿಯಿಲ್ಲ. ಈ ವಿಚಾರವಾಗಿ ವದಂತಿ ಹರಡಿಸಿದರೆ ಕಠಿಣ ಕ್ರಮ ತೆಗೆದು ಕೊಳ್ಳಲಾಗುವುದು ಎಂದು ಆರೋಗ್ಯ ಹಾಗೂ ಕುಟುಂಬ ಕಲ್ಯಾಣ ಇಲಾಖೆ ಎಚ್ಚರಿಕೆ ನೀಡಿದೆ.
ನೆರೆ ರಾಜ್ಯಗಳಾದ ಕೇರಳ ಹಾಗೂ ತೆಲಂಗಾಣದಲ್ಲಿ ಕೊರೋನಾ ವೈರಸ್ ಬಗ್ಗೆ ವದಂತಿ ಹರಡುವವೆ ಮೇಲೆ ಪೊಲೀಸರು ಪ್ರಕರಣ ದಾಖಲು ಮಾಡುತ್ತಿದ್ದಾರೆ. ಹಾಗೆಯೇ ರಾಜ್ಯದಲ್ಲಿಯೂ ವದಂತಿ ಹರಡುವವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಇಲಾಖೆಯ ಆಯುಕ್ತ ಪಂಕಜ್ ಕುಮಾರ್ ಪಾಂಡೆ ತಿಳಿಸಿದ್ದಾರೆ.
ಇತ್ತೀಚೆಗೆ ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಟೆಕ್ಕಿಯೊಬ್ಬರಿಗೆ ಕೊರೋನಾ ವೈರಸ್ ಸೋಂಕು ತಗುಲಿರುವುದು ಅವರು ಹೈದರಾಬಾದ್ಗೆ ತೆರಳಿದ ಬಳಿಕ ಪತ್ತೆಯಾಗಿತ್ತು. ತಕ್ಷಣವೇ ಕಾರ್ಯಪ್ರವೃತ್ತವಾಗಿದ್ದ ಸರ್ಕಾರ ಸೋಂಕು ಹರಡದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿತ್ತು.