ನವದೆಹಲಿ, ಮಾ. 04 (Daijiworld News/MB) : ನಿರ್ಭಯಾ ಅತ್ಯಾಚಾರ ಹಾಗೂ ಹತ್ಯೆ ಪ್ರಕರಣದಲ್ಲಿ ಅಪರಾಧಿಯಾಗಿರುವ ಪವನ್ ಗುಪ್ತಾ ಕ್ಷಮದಾನ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ರಾಷ್ಟ್ರಪತಿ ರಾಮ್ನಾಥ್ ಕೋವಿಂದ್ ಬುಧವಾರ ತಿರಸ್ಕಾರ ಮಾಡಿದ್ದಾರೆ. ಈ ಮೂಲಕ ಅಪರಾಧಿಗಳಿಗೆ ಗಲ್ಲು ಶಿಕ್ಷೆ ಖಾಯಂ ಆಗಿದೆ.
ನಿರ್ಭಯಾ ಸಾಮೂಹಿಕ ಅತ್ಯಾಚಾರದಲ್ಲಿ ಅಪರಾಧಿಗಳಲ್ಲಿ ಓರ್ವನಾದ ಪವನ್ ಗುಪ್ತಾ , ಸೋಮವಾರ ಸುಪ್ರೀಂ ಕೋರ್ಟ್ಗೆ ಸಲ್ಲಿಸಿದ್ದ ಕ್ಯುರೇಟಿವ್ ಅರ್ಜಿಯನ್ನು ಕೋರ್ಟ್ ತಿರಸ್ಕಾರ ಮಾಡಿದೆ. ಆ ಬಳಿಕ ಆತ ಕ್ಷಮದಾನವನ್ನು ಕೋರಿ ರಾಷ್ಟ್ರಪತಿಯವರಿಗೆ ಅರ್ಜಿ ಸಲ್ಲಿಸಿದ್ದ.
ಇಂದು ರಾಷ್ಟ್ರಪತಿ ರಾಮ್ನಾಥ್ ಕೋವಿಂದ್ ಅವರು ಪವನ್ ಗುಪ್ತಾ ಸಲ್ಲಿಸಿದ್ದ ಕ್ಷಮದಾನ ಅರ್ಜಿಯನ್ನು ತಿರಸ್ಕಾರ ಮಾಡಿದ್ದು ಈ ಮೂಲಕ ಅಪರಾಧಿಗಳಿಗೆ ಗಲ್ಲು ಖಾಯಂ ಆಗಿದೆ.
ಮಂಗಳವಾರ ನಡೆಯಲಿದ್ದ ಗಲ್ಲು ಶಿಕ್ಷೆ ಅರ್ಜಿ ಬಾಕಿಯಿದ್ದ ಹಿನ್ನಲೆಯಲ್ಲಿ ಮುಂದೂಡಿದ್ದು ಈಗ ಹೊಸ ಡೆತ್ ವಾರಂಟ್ ಇನ್ನಷ್ಟೇ ಜಾರಿಯಾಗಬೇಕಿದೆ.