ನವದೆಹಲಿ, ಮಾ 4 (Daijiworld News/MSP): ನಿರ್ಭಯಾ ಸಾಮೂಹಿಕ ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೋಷಿ ಪವನ್ ಗುಪ್ತ ಸಲ್ಲಿಸಿದ್ದ ಕ್ಷಮಾದಾನ ಅರ್ಜಿಯನ್ನು ರಾಷ್ಟ್ರಪತಿ ರಾಮನಾಥ್ ಕೋವಿಂದ್ ತಿರಸ್ಕರಿಸಿದ ಬೆನ್ನಲ್ಲೇ ತಿಹಾರ್ ಜೈಲು ಆಡಳಿತ ದೆಹಲಿ ಪಟಿಯಾಲ ಹೌಸ್ ಕೋರ್ಟ್ ಮೆಟ್ಟಿಲೇರಲು ಮುಂದಾಗಿದೆ.
ನಿರ್ಭಯಾ ಅತ್ಯಾಚಾರ ಅಪರಾಧಿಗಳಿಗೆ ಹೊಸದಾಗಿ ಡೆತ್ ವಾರೆಂಟ್ ಜಾರಿ ಮಾಡಿಲು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುತ್ತೇವೆ ಎಂದು ಜೈಲಿನ ವಕ್ತಾರರು ತಿಳಿಸಿದ್ದಾರೆ.
ನಿರ್ಭಯಾ ಪ್ರಕರಣದಲ್ಲಿ ಗಲ್ಲುಶಿಕ್ಷೆಗೆ ಗುರಿಯಾಗಿರುವ ನಾಲ್ವರು ದೋಷಿಗಳು ಗಲ್ಲುಶಿಕ್ಷೆ ವಿಳಂಬಕ್ಕೆ ಇನ್ನಿಲ್ಲದ ಕರಸತ್ತು ನಡೆಸಿದ್ದರು. ದೋಷಿಗಳ ಪೈಕಿ ಪವನ್ ಕುಮಾರ್ ಗುಪ್ತ ಕ್ಷಮಾದಾನ ಕೋರಿ ರಾಷ್ಟ್ರಪತಿಗಳಿಗೆ ಅರ್ಜಿ ಸಲ್ಲಿಸಿದ್ದ. ರಾಷ್ಟ್ರಪತಿಗಳು ಈ ಅರ್ಜಿಯನ್ನು ತಿರಸ್ಕರಿಸಿದ್ದಾರೆ. ರಾಷ್ಟ್ರಪತಿಗಳು ಈಗಾಗಲೇ ದೋಷಿಗಳಾದ ವಿನಯ್ ಕುಮಾರ್, ಅಕ್ಷಯ್ ಠಾಕೂರ್, ಮುಖೇಶ್ ಸಿಂಗ್ ಅವರ ಕ್ಷಮಾದಾನ ಅರ್ಜಿಯನ್ನು ಈಗಾಗಲೇ ವಜಾಗೊಳಿಸಿದ್ದಾರೆ. ನಾಲ್ವರು ಅಪರಾಧಿಗಳ ಎಲ್ಲಾ ಕಾನೂನು ದಾರಿಗಳು ಕೊನೆಗೊಂಡಿದೆ
ಎಲ್ಲ ಅಪರಾಧಿಗಳೂ ಕಾನೂನು ಪ್ರಕ್ರಿಯೆಯಲ್ಲಿ ತಮ್ಮ ಸಂಪೂರ್ಣ ಹಕ್ಕುಗಳನ್ನು ಬಳಸಿಕೊಂಡಿದ್ದಾರೆ. ಶೀಘ್ರವೇ ಹೊಸ ಡೆತ್ ವಾರೆಂಟ್ ಜಾರಿ ಮಾಡಬೇಕು. ಗಲ್ಲಿಗೇರಿಸಲು ಹೊಸ ದಿನಾಂಕವನ್ನು ನಿಗದಿಪಡಿಸಬೇಕು ಎಂದು ದೆಹಲಿ ಪಟಿಯಾಲ ಕೋರ್ಟ್ಗೆ ಮನವಿ ಮಾಡುತ್ತೇವೆ ಎಂದು ಹೇಳಿದ್ದಾರೆ.