ಬೆಂಗಳೂರು, ಮಾ. 05 (Daijiworld News/MB) : ಮೀನುಗಾರ ಮಹಿಳೆಯರ ಸಬಲೀಕರಣಕ್ಕೆ ದ್ವಿ ಚಕ್ರ ವಾಹನ ನೀಡಲಾಗುವುದು ಎಂದು ಬಜೆಟ್ನಲ್ಲಿ ಬಿಎಸ್ವೈ ತಿಳಿಸಿದ್ದಾರೆ.
ಉಡುಪಿಯ ಹೆಜಮಾಡಿಕೋಡಿಯಲ್ಲಿ ಅಂದಾಜು 181 ಕೋಟಿ ರೂ. ವೆಚ್ಚದ್ದಲ್ಲಿ ಮೀನುಗಾರಿಕಾ ಬಂದರು ನಿರ್ಮಾಣ, ಉಡುಪಿ ಜಿಲ್ಲೆಯ ಹಂಗಾರಕಟ್ಟೆ ಬಂದರನ್ನು 130 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಮಾಡಲಾಗುವುದು ಎಂದಿದ್ದಾರೆ.
ಕರ್ನಾಟಕ ಮತ್ಸ್ಯ ವಿಕಾಸ ಯೋಜನೆಗೆ 1.5 ಕೋಟಿ ರೂ. ಮಂಜೂರು ಮಾಡಲಾಗುವುದು, ಮೀನುಗಾರ ಮಹಿಳೆಯರಿಗೆ ಅನುಕೂಲವಾಗುವ ನಿಟ್ಟಿನಲ್ಲಿ 1 ಸಾವಿರ ಮೀನುಗಾರ ಮಹಿಳೆಯರಿಗೆ ದ್ವಿಚಕ್ರ ವಾಹನ ಕಲ್ಪಿಸುವ ಯೋಜನೆಗೆ 5 ಕೋಟಿ ರೂ. ಮಂಜೂರು ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಹಿನ್ನೀರು ಮೀನುಗಾರಿಕೆ ಸದೃಢಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ. ಮುಲ್ಕಿಯಲ್ಲಿ ಎರಡು ಕೋಟಿ ರೂ. ವೆಚ್ಚದಲ್ಲಿ ಹಿನ್ನೀರು ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪನೆ ಮಾಡಲಾಗುತ್ತದೆ ಎಂದು ಹೇಳಿದರು.
ಮಂಗಳೂರು ತಾಲ್ಲೂಕಿನ ಕುಳಾಯಿಯಲ್ಲಿ ನಿರ್ಮಿಸಲಾಗುತ್ತಿರುವ ಹೊಸ ಮೀನುಗಾರಿಕೆ ಬಂದರಿನಲ್ಲಿ 12.5 ಕೋಟಿ ರೂ. ವೆಚ್ಚದಲ್ಲಿ ಆಧುನಿಕ ಕರಾವಳಿ ಮೀನು ರಫ್ತು ಸ್ಥಾವರ ಸ್ಥಾಪನೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.