ಬೆಂಗಳೂರು, ಮಾ 5(Daijiworld News/MSP): ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಮಹಿಳೆ ಕಾರ್ಮಿಕರಿಗೆ ರಾಜ್ಯ ಬಜೆಟ್ ನಲ್ಲಿ ಭರ್ಜರಿ ಬಂಫರ್ ಗಿಫ್ಟ್ ನೀಡಿದ್ದಾರೆ. 1 ಲಕ್ಷ ಮಹಿಳಾ ಕಾರ್ಮಿಕರಿಗೆ ಉಚಿತ ಬಿಎಂಟಿಸಿ ಬಸ್ ಪಾಸ್ ನೀಡಲಾಗುತ್ತದೆ ಎಂಬುದಾಗಿ ಘೋಷಿಸಿದ್ದಾರೆ.
ಬಿಎಂಟಿಸಿ ಹಾಗೂ ಕಾರ್ಮಿಕ ಕಲ್ಯಾಣ ಇಲಾಖೆಯ ಜೊತೆಗೂಡಿ ಬೆಂಗಳೂರಿನ ಮಹಿಳಾ ಕಾರ್ಮಿಕರಿಗೆ ಉಚಿತ ಬಿಎಂಟಿಸಿ ಬಸ್ ಪಾಸ್ ವಿತರಿಸುವ ಪ್ರಸ್ತಾವನೆಯನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮುಂದೆ ಸಲ್ಲಿಸಿದ್ದರು. ಇಂತಹ ಯೋಜನೆಗೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಇಂದು ಮಂಡಿಸಿದ ಬಜೆಟ್ ನಲ್ಲಿ ಅನುಮೋದನೆ ನೀಡಿದ್ದು, ಈ ಮೂಲಕ ಮಹಿಳೆಯರಿಗೆ ಮಹಿಳಾ ದಿನಾಚರಣೆಯಂದೇ ಬಂಫರ್ ಗಿಫ್ಟ್ ನೀಡಿದ್ದಾರೆ.
ಈ ಹಿನ್ನಲೆಯಲ್ಲಿ ಮಹಿಳಾ ಕಾರ್ಮಿಕರಿಗೆ ಈ ವರ್ಷದಿಂದಲೇ ಉಚಿತ ಬಿಎಂಟಿಸಿ ಬಸ್ ಪಾಸ್ ದೊರೆಯಲಿದೆ. ಈ ಮೂಲಕ ಮಹಿಳೆಯರಿಗೆ ರಾಜ್ಯ ಬಜೆಟ್ ನಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಬಂಫರ್ ಗಿಫ್ಟ್ ನೀಡಿದ್ದಾರೆ. ಅದೂ ಇಂದು ಮಹಿಳಾ ದಿನಾಚರಣೆಯಂದೇ ಆಗಿದೆ.
ದುಡಿಯುವ ಮಹಿಳೆಯರಿಗೆ ಸಹಾಯವಾಗುವ ನಿಟ್ಟಿನಲ್ಲಿ ಮಾತ್ರವಲ್ಲದೆ ಸಂಚಾರಿ ಶಿಶುಪಾಲಾನಾ ಕೇಂದ್ರವನ್ನು ಸ್ಥಾಫಿಸಲು ರಾಜ್ಯ ಸರ್ಕಾರ ಚಿಂತಿಸಿದೆ.