ಬೆಂಗಳೂರು, ಮಾ. 05 (Daijiworld News/MB) : ಕರ್ನಾಟಕ ರಾಜ್ಯದ ಸರ್ವ ಜನಾಂಗದ ಕಲ್ಯಾಣವನ್ನು ಗಮನದಲ್ಲಿಟ್ಟುಕೊಂಡು, ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ವರದಿ ಮಂಡಿಸಿದ್ದಾರೆ ಎಂದು ಉಪಮುಖ್ಯಮಂತ್ರಿ ಗೋವಿಂದ ಎಂ ಕಾರಜೋಳ ಅವರು ಹೇಳಿದರು.
ನೆರೆ- ಬರ, ರೈತರ ಸಾಲ ಮನ್ನಾ ಯೋಜನೆಯ ವ್ಯವಸ್ಥಿತ ಅನುಷ್ಠಾನ ಸೇರಿದಂತೆ ರಾಜ್ಯ ಸರ್ಕಾರವು ಆರ್ಥಿಕ ಸಂಕಷ್ಟದಲ್ಲಿದ್ದರೂ ಕೂಡಾ ರಾಜ್ಯದ ಸರ್ವತೋಮುಖ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಯಡಿಯೂರಪ್ಪನವರು ಅತ್ಯುತ್ತಮವಾದ ಬಜೆಟ್ ಮಂಡನೆ ಮಾಡಿದ್ದಾರೆ ಎಂದರು.
ಕೃಷ್ಣ ಮೇಲ್ದಂಡೆ ಯೋಜನೆಗೆ ನೀರಾವರಿ ಇಲಾಖೆಯು ಕ್ರಿಯಾ ಯೋಜನೆಯನ್ನು ಸಿದ್ದಪಡಿಸುವ ಸಂದರ್ಭದಲ್ಲಿ ಪುನರ್ವಸತಿ ಮತ್ತು ಪುನರ್ ನಿರ್ಮಾಣ (ಆರ್ & ಆರ್ ) ಕಾಮಗಾರಿಗಳಿಗೆ 10 ಸಾವಿರ ಕೋಟಿ ರೂ. ಅನುದಾನವನ್ನು 2020-21 ನೇ ಸಾಲಿನಲ್ಲಿ ಒದಗಿಸುವ ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು.