ದೆಹಲಿ, ಮಾ 05(DaijiworldNews/SM): ರಾಷ್ಟ್ರ ರಾಜಧಾನಿಯಲ್ಲಿ ನಡೆದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಸಭೆಯಲ್ಲಿ ಗದ್ದಲ ವೆಬ್ಬಿಸಿದ ಹಾಗೂ ಅಶಿಸ್ತಿನ ವರ್ತನೆ ತೋರಿದ ಏಳು ಮಂದಿ ಕಾಂಗ್ರೆಸ್ ಸಂಸದರನ್ನು ಸ್ಪೀಕರ್ ಓಂ ಬಿರ್ಲಾ ಅವರು ಅಮಾನತುಗೊಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಕಾಂಗ್ರೆಸ್ ನ ಸಂಸದರಾದ ಗೌರವ್ ಗೊಗೊಯಿ, ಟಿ.ಎನ್.ಪ್ರತಾಪನ್, ಮಾಣಿಕಂ ಟಾಗೋರ್, ಗುರ್ಜೀತ್ ಸಿಂಗ್ ಔಜಲಾ, ಬೆನ್ನಿ ಬೆಹಾನನ್, ರಾಜಮೋಹನ್ ಉನ್ನಿತಾನ್ ಮತ್ತು ಡೀನ್ ಕುರಿಯಾಕೋಸ್ ಅವರನ್ನು ಇನ್ನುಳಿದ ಸದನದ ಕಲಾಪದಿಂದ ಅಮಾನತುಗೊಳಿಸಿ ಆದೇಶ ನೀಡಿದ್ದಾರೆ.
ದೆಹಲಿ ಗಲಭೆ ಸಂಬಂಧ ತೀವ್ರ ವಿರೋಧ ವ್ಯಕ್ತಪಡಿಸುತ್ತಾ ಇವರು ಅಶಿಸ್ತಿನ ವರ್ತನೆ ತೋರಿದ್ದಾರೆ. ನಿರಂತರ ಎಚ್ಚರಿಕೆಯ ಬಳಿಕವೂ ಅದೇ ಪ್ರವೃತಿ ಮುಂದುವರೆಸಿದ ಹಿನ್ನೆಲೆಯಲ್ಲಿ ಅವರನ್ನು ಸ್ಪೀಕರ್ ಓಂ ಬಿರ್ಲಾ ಅಮಾನತು ಮಾಡಿದ್ದಾರೆ ಎಂದು ತಿಳಿದುಬಂದಿದೆ.
ಲೋಕಸಭೆಯಲ್ಲಿ ಧ್ವನಿಮತದ ಮೂಲಕ ಅಮಾನತು ಆದೇಶವನ್ನು ಪಾಸ್ ಮಾಡಲಾಗಿದೆ.