ಮುಂಬೈ, ಮಾ. 07 (Daijiworld News/MB) : ಜಾರಿ ನಿರ್ದೇಶನಾಲಯದ(ಇ.ಡಿ) ಅಧಿಕಾರಿಗಳು ಯೆಸ್ ಬ್ಯಾಂಕ್ ಸ್ಥಾಪಕ ರಾಣಾ ಕಪೂರ್ ಅವರ ಮುಂಬೈ ನಿವಾಸಕ್ಕೆ ಶುಕ್ರವಾರ ರಾತ್ರಿ ದಾಳಿ ನಡೆಸಿದ್ದು ಶೋಧ ನಡೆಸಿದ್ದಾರೆ.
ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಯೆಸ್ ಬ್ಯಾಂಕ್ ಸ್ಥಾಪಕ ರಾಣಾ ಕಪೂರ್ ಅವರ ನಿವಾಸದ ಮೇಲೆ ದಾಳಿ ನಡೆಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ(ಪಿಎಂಎಲ್ಎ) ಹೆಚ್ಚಿನ ಸಾಕ್ಷ್ಯ ಸಂಗ್ರಹಿಸಲು ಈ ದಾಳಿ ನಡೆಸಲಾಗಿದೆ.
ಬ್ಯಾಂಕ್ನ ಆರ್ಥಿಖ ಬಿಕ್ಕಟ್ಟಿಗೆ ಬೇರೆ ಕಾರಣಗಳೊಂದಿಗೆ ಉನ್ನತ ಅಧಿಕಾರಿಗಳ ಅವ್ಯವಹಾರಗಳೂ ಕೂಡಾ ಕಾರಣವಾಗಿರುವ ಹಿನ್ನಲೆಯಲ್ಲಿ ಬ್ಯಾಂಕ್ನ ನಿರ್ದೇಶಕ ಮಂಡಳಿ ಪುನರ್ರಚನೆಗೆ ಸರ್ಕಾರ ಮುಂದಾಗಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಹೇಳಿಕೆ ನೀಡಿದ್ದರು.
ಹಾಗೆಯೇ ಈ ಬ್ಯಾಂಕ್ನ ಬಿಕ್ಕಟ್ಟಿಗೆ ಕಾರಣರಾದವರನ್ನು ಪತ್ತೆ ಹಚ್ಚುವಲ್ಲಿ ಆರ್ಬಿಐ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ್ದರು.
ಈ ಎಲ್ಲಾ ಬೆಳವಣಿಗೆಯ ಹಿನ್ನೆಲೆಯಲ್ಲಿ ಜಾರಿ ನಿರ್ದೇಶನಾಲಯ ಶೋಧ ನಡೆಸಿದೆ.
ಬ್ಯಾಂಕ್ ಮೇಲಿನ ನಿರ್ಬಂಧ ಏಪ್ರಿಲ್ 3ರವರೆಗೆ ಇರಲಿದೆ.