ರಾಂಪುರ, ಮಾ. 07 (Daijiworld News/MB) : ಉತ್ತರ ಪ್ರದೇಶ ನ್ಯಾಯಾಲಯ ಹಿರಿಯ ನಟಿ ಹಾಗೂ ಬಿಜೆಪಿ ನಾಯಕಿ ಜಯಪ್ರದಾ ಅವರಿಗೆ ಶನಿವಾರ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿದೆ.
ಜಯಪ್ರದಾ ಅವರು ಕಳೆದ ಲೋಕಸಭಾ ಚುನಾವಣೆಯಲ್ಲಿ ಉತ್ತರ ಪ್ರದೇಶದ ರಾಂಪುರ ಕ್ಷೇತ್ರದಿಂದ ಚುನಾವಣೆಗೆ ಸ್ಫರ್ಧಿಸಿದ್ದರು. ಈ ಸಂದರ್ಭದಲ್ಲಿ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಉಲ್ಲಂಘನೆ ಮಾಡಿದ್ದಾರೆ ಎಂದು ಆರೋಪ ಮಾಡಲಾಗಿತ್ತು.
ಈ ಪ್ರಕರಣಕ್ಕೆ ಸಂಬಂಧಿಸಿ ಇದೀಗ ಉತ್ತರ ಪ್ರದೇಶ ನ್ಯಾಯಾಲಯ ವಾರೆಂಟ್ ಹೊರಡಿಸಿದ್ದು, ಮುಂದಿನ ಏಪ್ರಿಲ್ 20 ರಂದು ವಿಚಾರಣೆ ನಡೆಯಲಿದೆ.
ಕಳೆದ ವರ್ಷ ನಡೆದ ಲೋಕಸಭೆ ಚುನಾವಣೆಯಲ್ಲಿ ರಾಮ್ ಪುರ್ ಕ್ಷೇತ್ರದಲ್ಲಿ ಜಯಪ್ರದಾ ಬಿಜೆಪಿಯಿಂದ ಸ್ಫರ್ಧೆ ಮಾಡಿದ್ದು ತಮ್ಮ ಪ್ರತಿಸ್ಪರ್ಧಿ ಸಮಾಜವಾದಿ ಪಕ್ಷದ ಅಜಂಖಾನ್ ವಿರುದ್ಧ 1 ಲಕ್ಷಕ್ಕೂ ಅಧಿಕ ಅಂತರಲ್ಲಿ ಸೋಲು ಕಂಡಿದ್ದರು.