ಬೆಂಗಳೂರು, ಮಾ.07 (DaijiworldNews/PY) : ರಾಜ್ಯದಲ್ಲಿ ಈಗಾಗಲೇ ಕೊರೋನಾ ಭೀತಿ ಅಧಿಕವಾಗಿದ್ದು, ದೆಹಲಿಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ರಾಜ್ಯದ ಶಾಲಾ-ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಜ್ಚರ ಕಾಣಿಸಿಕೊಂಡರೆ ರಜೆ ನೀಡುವಂತೆ ಶಿಕ್ಷಣ ಇಲಾಖೆ ಸುತ್ತೋಲೆ ನೀಡಿದೆ.
ಕೊರೋನಾ ಭೀತಿ ಹೆಚ್ಚಾದರೆ ಶಾಲೆಯಲ್ಲಿ ಹೆಚ್ಚಿನ ಮಕ್ಕಳಿಗೆ ಜ್ವರದಂತಹ ಸಾಂಕ್ರಾಮಿಕ ರೋಗ ಕಾಣಿಸಿಕೊಂಡರೆ ಅಂತಹ ಶಾಲಾ-ಕಾಲೇಜಿಗೆ ರಜೆ ಘೋಷಣೆ ಮಾಡಲಾಗುತ್ತದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.
ಪಿಯುಸಿ ಪರೀಕ್ಷಾ ಕೊಠಡಿಯಲ್ಲಿ ಈ ಮೊದಲು ಮೂವತ್ತು ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದರು. ಆದರೆ, ಈ ಬಾರಿ ಮಾತ್ರ ಹದಿನೈದು ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡಿದ್ದಾರೆ. ಸಾಂಕ್ರಾಮಿಕ ರೋಗ ಭೀತಿಯಲ್ಲಿ ಬೆಂಚ್ಗಳನ್ನು ದೂರ ದೂರಕ್ಕೆ ಇಡಲಾಗಿದ್ದು, ಮಾಸ್ಕ್ ಧರಿಸುವ ಅವಕಾಶ ನೀಡಲಾಗಿದೆ.