ಬೆಳಗಾವಿ, ಮಾ.07 (DaijiworldNews/PY) : "ಕಾಮಾಲೆ ಕಣ್ಣಿಗೆ ಕಾಣುವುದೆಲ್ಲಾ ಹಳದಿ. ಹಾಗಾಗಿ ಇದಕ್ಕೆ ಏನು ಮಾಡಲು ಸಾಧ್ಯವಿಲ್ಲ" ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು, ದರಿದ್ರ ಸರ್ಕಾರ ಎಂದ ಸಿದ್ದರಾಮಯ್ಯ ಅವರ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.
ಶನಿವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿ"ಎಂ ಬಿಎಸ್ವೈ ಅವರು ಆರ್ಥಿಕ ಮುಗ್ಗಟ್ಟಿನ ಪರಿಸ್ಥಿತಿಯಲ್ಲೂ ಉತ್ತಮ ಬಜೆಟ್ ಮಂಡನೆ ಮಾಡಿದ್ದಾರೆ. 7 ಸಾವಿರ ಕೋಟಿ ಕೃಷ್ಣಾ ನೀರಾವರಿ ಯೋಜನೆಗಳಿಗೆ ಕೇಳಿದ್ದೆವು. 10 ಸಾವಿರ ಕೋಟಿ ನೀಡಿದ್ದಾರೆ. ಹೆಚ್ಚಿನ ಹಣವನ್ನು ರೈತರು ಹಾಗೂ ಕಾರ್ಮಿಕರ ಅಭಿವೃದ್ಧಿಗಾಗಿ ನೀಡಿದ್ದಾರೆ. ರಾಜ್ಯದ ಅಭಿವೃದ್ದಿ ಪರವಾದ ಬಜೆಟ್ ಮಂಡನೆ ಮಾಡಿದ್ದಾರೆ" ಎಂದು ಶ್ಲಾಘಿಸಿದರು.
"ಮಹದಾಯಿ ಪ್ರಕರಣ ನ್ಯಾಯಾಲಯದಲ್ಲಿದೆ. ಕಾನೂನು ತೊಡಕುಗಳಿವೆ. ಗೋವಾ ಮುಖ್ಯಮಂತ್ರಿ ದೆಹಲಿಯಲ್ಲಿದ್ದಾರೆ. ರಾಜ್ಯದ ಹಿತದೃಷ್ಟಿಯಿಂದ ಏನೂ ಕೇಳಬೇಡಿ. ದಯವಿಟ್ಟು ಸಹಕರಿಸಿ" ಎಂದು ಮಾಧ್ಯಮದವರಲ್ಲಿ ಕೇಳಿಕೊಂಡರು.