ಚಾಮರಾಜನಗರ ಮಾ 8 (Daijiworld News/MSP): ಈ ಜಿಲ್ಲೆಯ ದತ್ತಿ ಇಲಾಖೆಯ ದೇವಸ್ಥಾನಗಳಲ್ಲಿ ಇನ್ಮುಂದೆ ಕನ್ನಡದಲ್ಲಿಯೇ ಮಂತ್ರ ಕೇಳಿಬರಲಿದೆ. ಹೀಗೊಂದು ವಿನೂತನ ಕ್ರಮ ಅಲ್ಲಿನ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.
ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೊಳಪಡುವ ಚಾಮರಾಜನಗರ ಜಿಲ್ಲೆಯ ಎಲ್ಲಾ ದೇವಾಲಯಗಳಲ್ಲಿ ಇನ್ನು ಮುಂದೆ ಕನ್ನಡ ಭಾಷೆಯಲ್ಲಿಯೇ ಮಂತ್ರೋಚ್ಚಾರಣೆ, ಪೂಜಾ ವಿಧಿ ವಿಧಾನಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ಸೂಚಿಸಿದ್ದಾರೆ.
ಜಿಲ್ಲೆಯ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೊಳಪಡುವ ಎ, ಬಿ ಮತ್ತು ಸಿ ಶ್ರೇಣಿಯ ಎಲ್ಲಾ ದೇವಾಲಯಗಳಲ್ಲಿ ಇನ್ನುಮುಂದೆ ಕನ್ನಡ ಭಾಷೆಯಲ್ಲಿಯೇ ಪೂಜಾ ವಿಧಿ ವಿಧಾನ ಕೈಗೊಳ್ಳಬೇಕು. ಮಂತ್ರೋಚ್ಚಾರಣೆ, ಅರ್ಚನೆ, ಸಂಕಲ್ಪ ಇತ್ಯಾದಿ ಪೂಜಾ ಕೈಂಕರ್ಯವನ್ನು ಚಾಲ್ತಿಯಲ್ಲಿರುವ ಸಂಪ್ರದಾಯ ಹಾಗೂ ಧಾರ್ಮಿಕ ಪದ್ಧತಿಗಳಿಗೆ ಧಕ್ಕೆ ಬಾರದಂತೆ ಕನ್ನಡದಲ್ಲಿ ನೆರವೇರಿಸಿಬೇಕೆಂದು ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಅವರು ಸೂಚಿಸಿದ್ದಾರೆ.