ಮೈಸೂರು, ಮಾ.08 (DaijiworldNews/PY) : ಕೆಲವು ರೈತರ ಸಾಲ ಮನ್ನಾ ದಾಖಲೆಯ ಸಮಸ್ಯೆಯಿಂದ ಆಗಿಲ್ಲ. ಎಂದು ಕೃಷಿ ಸಚಿವ ಬಿ.ಸಿ ಪಾಟೀಲ್ ಅಧಿವೇಶನದಲ್ಲಿ ಹೇಳಿದ್ದರು. ಈ ವಿಚಾರಕ್ಕೆ ಪ್ರತಿಕ್ರಿಯಿಸಿದ ಎಚ್ಡಿಕೆ "ಸುಮ್ಮನೆ ಸುಳ್ಳು ಹೇಳಿಕೊಂಡು ಓಡಾಡಬೇಡಿ" ಎಂದು ಹೇಳಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎಚ್ಡಿಕೆ ಅವರು, "ಕೃಷಿ ಸಚಿವರಿಗೆ ಸಾಲ ಮನ್ನಾದ ವಿಚಾರದ ಬಗ್ಗೆ ಮಾಹಿತಿ ಇಲ್ಲ ಎಂದು ತಿಳಿಯುತ್ತದೆ. ನಾನು ಅಧಿಕಾರದಿಂದ ಇಳಿಯುವ ಸಂದರ್ಭ ಕೇವಲ ಘೋಷಣೆ ಮಾತ್ರ ಮಾಡಿಲ್ಲ. ಬದಲಾಗಿ ರೈತರ ಸಾಲ ಮನ್ನಾಕ್ಕಾಗಿ 25 ಸಾವಿರ ಕೋಟಿ. ರೂ ಹೊಂದಿಸಿ ಅಧಿಕಾರದಿಂದ ಇಳಿದಿದ್ದೇನೆ. ಸರ್ಕಾರ ಇನ್ನೂ ಈ ಹಣದಲ್ಲಿ 800 ಕೋಟಿ ಹಣವನ್ನು ಬಿಡುಗಡೆ ಮಾಡದೇ ಹಾಗೆಯೇ ಇಟ್ಟುಕೊಂಡಿದ್ದಾರೆ" ಎಂದು ತಿಳಿಸಿದರು.
"ಕೆಲವು ರೈತರ ದಾಖಲೆ ಸರಿಯಾಗಿಲ್ಲ. ಹಾಗಾಗಿ ನಾಲ ಮನ್ನಾ ಆಗಿಲ್ಲ ಎಂದು ಹೇಳಿಕೆ ನೀಡಿದ ಬಿ.ಸಿ ಪಾಟೀಲ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಎಚ್ಡಿಕೆ ಅವರು, ಸಾಲ ಮನ್ನಾ ಮಾಡುವ ಮುನ್ನ ನಾವು ರೈತರಿಂದ ಸರಳ ದಾಖಲೆ ಕೇಳಿದ್ದೆವು. ರೈತರ ದಾಖಲೆ ತಪ್ಪಾಗಿದ್ದರೆ ಅದನ್ನು ಸರಿಪಡಿಸುವುದು ಇಲಾಖೆಯ ಕೆಲಸ. ಈ ವಿಚಾರದ ಬಗ್ಗೆ ಸುಳ್ಳು ಹೇಳಿಕೊಂಡು ಓಡಾಡುವುದ ಬೇಡ" ಎಂದು ಹೇಳಿದ್ದಾರೆ.
ಶಾದಿ ಭಾಗ್ಯ ಯೋಜನೆಯನ್ನು ರದ್ದು ಮಾಡಿದ ವಿಚಾರದಲ್ಲಿ ಪ್ರತಿಕ್ರಿಯಿಸಿದ ಎಚ್ಡಿಕೆ ಅವರು, "ಬಿಜೆಪಿ ಸರ್ಕಾರ ಶಾದಿ ಭಾಗ್ಯ ಒಂದೇ ಅಲ್ಲ. ಇಡೀ ರಾಜ್ಯದ ಅಭಿವೃದ್ದಿ ಕಾರ್ಯವನ್ನೇ ಸ್ಥಗಿತ ಮಾಡಿದೆ. ತಮ್ಮ ಕ್ಷೇತ್ರಕ್ಕೆ ಅನುದಾನ ಬಂದಿಲ್ಲ ಎಂದು ಬಿಜೆಪಿ ಶಾಸಕರೇ ಬೆಳಗಾವಿಯಲ್ಲಿ ಗಲಾಟೆ ಮಾಡಿದ್ದಾರೆ. ನೆರೆ ಹಾವಳಿ ಸಂತ್ರಸ್ತರಿಗೆ ಹಣ ಬಿಡುಗಡೆ ಮಾಡಿ ಎಂದು ಅಧಿಕಾರಿಗಳಿಗೆ ಸಿಎಂ ಸೂಚಿಸಿದ್ದಾರೆ. ಆದರೂ, ಅಧಿಕಾರಿಗಳು ಹಣ ಬಿಡುಗಡೆ ಮಾಡಿಲ್ಲ ಎಂದು ಬಿಜೆಪಿ ಶಾಸಕರೇ ಆರೋಪಿಸಿದ್ದಾರೆ. ಇದು ಸದ್ಯದ ಬಿಜೆಪಿ ಸರ್ಕಾರದ ಸ್ಥಿತಿ
ಎಂದರು.