ಬೆಂಗಳೂರು, ಮಾ.09(DaijiworldNews/PY) : ಕೊರೊನಾ ಭೀರಿ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ ಹಾಗೂ ಬೆಂಗಳೂರು ಗ್ರಾಮಾಂತರ ಭಾಗದ ನರ್ಸರಿ, ಎಲ್ಕೆಜಿ ಹಾಗೂ ಯುಕೆಜಿ ತರಗತಿಗಳಿಗೆ ಸಾರ್ವಜನಿಕ ಶಿಕ್ಷಣ ಇಲಾಖೆ ರಜಾ ಘೋಷಿಸಿ ಆದೇಶ ಹೊರಡಿಸಿದೆ.
ಬೆಂಗಳೂರು ದಕ್ಷಿಣ, ಬೆಂಗಳೂರು ಉತ್ತರ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆ ಸೇರಿದಂತೆ ಈ ಮೂರು ಜಿಲ್ಲೆಯ ಸರ್ಕಾರಿ, ಅನುದಾನ ಹಾಗೂ ಅನುದಾನ ರಹಿತ ಶಾಲೆಗಳ ನರ್ಸರಿ, ಎಲ್ಕೆಜಿ, ಹಾಗೂ ಯುಕೆಜಿಯ ಪೂರ್ವ ಪ್ರಾಥಮಿಕ ಶಾಲೆಗಳಿಗೆ ಮುಂಜಾಗ್ರತೆ ಕ್ರಮವಾಗಿ ಮುಂದಿನ ಆದೇಶದವರೆಗೂ ರಜೆ ಘೋಷಣೆ ಮಾಡಲಾಗಿದೆ.
ಆರೋಗ್ಯ ಆಯುಕ್ತರ ಸಲಹೆ ಮೇರೆಗೆ ಬೆಂಗಳೂರು ಉತ್ತರ, ದಕ್ಷಿಣ ಮತ್ತು ಗ್ರಾಮಾಂತರ ಜಿಲ್ಲೆಗಳ ಎಲ್ಕೆಜಿ, ಯುಕೆಜಿ ಶಾಲೆಗಳಿಗೆ ಸೋಮವಾರದಿಂದ ರಜೆ ಘೋಷಿಸಲಾಗಿದೆ ಎಂದು ಸುರೇಶ್ ಕುಮಾರ್ ಟ್ವೀಟ್ ಮೂಲಕ ತಿಳಿಸಿದ್ಧಾರೆ.