ಗುವಾಹಟಿ, ಮಾ.09 (DaijiworldNews/PY) : "ಮುಂಬರುವ ಪಶ್ಚಿಮ ಬಂಗಾಳದ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಅವರನ್ನು ಸೋಲಿಸಿ ಬಿಜೆಪಿ ಅಧಿಕಾರಕ್ಕೆ ಬರಲಿದೆ" ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ರಾಮ್ ಮಾಧವ್ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ನಮಗೆ ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲುವ ಭರವಸೆಯಿದೆ. ಈ ಬಾರಿಯ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಅವರನ್ನು ಸೋಲಿಸಿ ಬಿಜೆಪಿ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ" ಎಂದರು.
2021ಕ್ಕೆ ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆಗಳಿವೆ.
ಪಶ್ಚಿಮ ಬಂಗಾಳಕ್ಕೆ ಮಾರ್ಚ್ ತಿಂಗಳ ಮೊದಲ ವಾರದಲ್ಲಿ ಭೇಟಿ ನೀಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬಿಜೆಪಿ ಅಧಿಕಾರಕ್ಕೆ ಬಂದರೆ ಪಶ್ಚಿಮ ಬಂಗಾಳವನ್ನು ಅಭಿವೃದ್ದಿಪಡಿಸಲಾಗುವುದು ಎಂದು ತಿಳಿಸಿದ್ದರು.