ಮುಂಬೈ, ಮಾ. 09 (Daijiworld News/MB) : ಅಕ್ರಮ ಹಣ ವರ್ಗಾವಣೆ ಆರೋಪದಡಿ ಇಡಿ ಕಸ್ಟಡಿಯಲ್ಲಿರುವ ಯೆಸ್ ಬ್ಯಾಂಕ್ ಸಂಸ್ಥಾಪಕ ರಾಣಾ ಕಪೂರ್ ಬಂಧನವಾದ ಬಳಿಕ ಇಡಿ ಅಧಿಕಾರಿಗಳು ನ್ಯಾಯಾಲಯಕ್ಕೆ ಹಾಜರು ಪಡಿಸಿದಾಗ ಕಣ್ಣೀರು ಸುರಿಸಿದ ಘಟನೆ ನಡೆದಿದೆ.
ತನ್ನನ್ನು ನ್ಯಾಯಾಧೀಶರ ಮುಂದೆ ಅಧಿಕಾರಿಗಳು ಹಾಜರುಪಡಿಸುತ್ತಿದ್ದಂತೆ ರಾಣಾ ಕಪೂರ್ ಕಣ್ಣೀರಿಟ್ಟಿದ್ದು ಇದನ್ನು ಕಂಡ ನ್ಯಾಯಾಧೀಶರು ಕಾನೂನು ಪ್ರಕ್ರಿಯೆ ತಡೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಆ ಬಳಿಕ ಒಂದು ಗಂಟೆಗೂ ಅಧಿಕ ಕಾಲ ವಿಚಾರಣೆ ನಡೆದಿದ್ದು ಇಡಿ ಪರ ವಕೀಲ ಸುನೀಲ್ ಗೋನ್ಸಾಲೆ ಅವರು ಯೆಸ್ ಬ್ಯಾಂಕ್ ಸಂಸ್ಥಾಪಕ ರಾಣಾ ಕಪೂರ್ ವಿರುದ್ಧವಿರುವ ಆರೋಪಗಳ ಪಟ್ಟಿ ಮಾಡಿದ್ದು ಹೆಚ್ಚಿನ ವಿಚಾರಣೆಗಾಗಿ ಅವರನ್ನು ಇಡಿಗೆ ಒಪ್ಪಿಸುವಂತೆ ಮನವಿ ಮಾಡಿದ್ದು ಪ್ರಸ್ತುತ ರಾಣಾ ಕಪೂರ್ ಇಡಿ ಕಸ್ಟಡಿಯಲ್ಲಿದ್ದಾರೆ.
ಯೆಸ್ ಬ್ಯಾಂಕ್ ಆರ್ಥಿಕವಾಗಿ ಬಿಕ್ಕಟ್ಟಿನಲ್ಲಿದ್ದು ಆರ್ಬಿಐ ಯೆಸ್ ಬ್ಯಾಂಕ್ನ ಆಡಳಿತವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಹಾಗೆಯೇ ಯೆಸ್ ಬ್ಯಾಂಕ್ ಪುನರ್ ಚೇತನಕ್ಕಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳುತ್ತಿದೆ.