ನವದೆಹಲಿ, ಮಾ. 10 (Daijiworld News/MB) : ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದ ಮಧ್ಯಪ್ರದೇಶ ಕಾಂಗ್ರೆಸ್ ನಾಯಕ ಜ್ಯೋತಿರಾಧಿತ್ಯ ಸಿಂಧಿಯಾ ಕಾಂಗ್ರೆಸ್ ಪಕ್ಷದಲ್ಲಿನ ತನ್ನ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.
ಮಧ್ಯಪ್ರದೇಶದ ಕಾಂಗ್ರೆಸ್ ಸರ್ಕಾರದಲ್ಲಿ ಬಂಡಾಯ ಎದ್ದಿದ್ದ ಅವರು ಮಂಗಳವಾರ ರಾಜೀನಾಮೆ ಪತ್ರವನ್ನು ಕಾಂಗ್ರೆಸ್ ಪಕ್ಷದ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಕಳುಹಿಸಿಕೊಟ್ಟಿದ್ದಾರೆ.
ಮೋದಿ ಹಾಗೂ ಅಮಿತ್ ಶಾ ಅವರನ್ನು ಭೇಟಿಯಾಗಿದ್ದ ಅವರು ಈಗ ಕಾಂಗ್ರೆಸ್ ತೊರೆದಿದ್ದು ಬಿಜೆಪಿ ಸೇರುತ್ತಾರೆಯೇ ಎಂಬ ಮಾತುಗಳು ಕೂಡಾ ಕೇಳಿಬಂದಿದೆ.