ಭೋಪಾಲ್, ಮಾ. 10 (Daijiworld News/MB) : ಮಧ್ಯಪ್ರದೇಶದ ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಕಾಂಗ್ರೆಸ್ ಪಕ್ಷದ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದು ಇದಾದ ಬಳಿಕ ಅವರ ಪರವಾಗಿದ್ದ 19 ಶಾಸಕರೂ ಕೂಡಾ ರಾಜೀನಾಮೆ ಸಲ್ಲಿಸಿದ್ದಾರೆ.
ರಾಜಭವನಕ್ಕೆ ಈ ಶಾಸಕರು ತಮ್ಮ ರಾಜೀನಾಮೆ ಪತ್ರವನ್ನು ಕಳುಹಿಸಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿದೆ.
ಹಾಗೆಯೇ ಇಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದ ಬಳಿಕ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸದ ಜ್ಯೋತಿರಾದಿತ್ಯ ಸಿಂಧಿಯಾ ಸಂಜೆ ಬಿಜೆಪಿ ಸೇರ್ಪಡೆಗೊಳ್ಳಲಿದ್ದಾರೆ ಎನ್ನಲಾಗಿದೆ.