ನವದೆಹಲಿ, ಮಾ. 11 (Daijiworld News/MB) : "ಚುನಾಯಿತ ಕಾಂಗ್ರೆಸ್ ಸರ್ಕಾರ ಅಸ್ಥಿರಗೊಳಿಸುವಲ್ಲಿ ಮೋದಿ ಬಿಝಿಯಾಗಿದ್ದಾರೆ" ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಈ ಕುರಿತಾಗಿ ಟ್ವೀಟ್ ಮಾಡಿರುವ ಅವರು, "ಪ್ರಧಾನಿ ಮೋದಿಯವರು ಅವರೆ ನೀವು ಚುನಾಯಿತ ಕಾಂಗ್ರೆಸ್ ಸರ್ಕಾರ ಅಸ್ಥಿರಗೊಳಿಸುವಲ್ಲಿ ಬಿಝಿಯಾಗಿದ್ದೀರಿ. ಈ ಸಂದರ್ಭದಲ್ಲಿ ನೀವು ಜಾಗತಿಕ ತೈಲ ಬೆಲೆಗಳಲ್ಲಿ ಶೇ.35 ರಷ್ಟು ಕುಸಿತವಾಗಿರುವುದನ್ನು ಗಮನಿಸದೆ ಇರಬಹುದು. ಪೆಟ್ರೋಲ್ ಬೆಲೆಯನ್ನು ಪ್ರತಿ ಲೀಟರ್ಗೆ 60 ರೂಪಾಯಿಗಿಂತ ಕಡಿಮೆ ಮಾಡುವ ಮೂಲಕ ಭಾರತೀಯರಿಗೆ ಉಪಕಾರ ಮಾಡುಬಹುದೆ? ಇದು ಸ್ಥಗಿತಗೊಂಡಿರುವ ಆರ್ಥಿಕತೆಯನ್ನು ಮುಂದಕ್ಕೆ ತಳ್ಳುತ್ತದೆ" ಎಂದು ಹೇಳಿದ್ದಾರೆ.
ಕಾಂಗ್ರೆಸ್ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ರಾಜೀನಾಮೆ ನೀಡಿದ ಬೆನ್ನಲ್ಲೇ 22 ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಿದ್ದು ಮಧ್ಯಪ್ರದೇಶ ಸರ್ಕಾರ ಬಿಕ್ಕಟ್ಟಿನಲ್ಲಿದೆ. ಈ ಎಲ್ಲ ರಾಜಕೀಯ ಬೆಳವಣಿಗೆಯ ಹಿಂದೆ ಪ್ರಧಾನಿ ನರೇಂದ್ರ ಮೋದಿಯವರ ಕೈವಾಡವಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈ ಟ್ವೀಟ್ ಮೂಲಕ ಆರೋಪಿಸಿದ್ದಾರೆ.