ಬೆಂಗಳೂರು, ಮಾ. 11 (Daijiworld News/MB) : ಡಿ.ಕೆ.ಶಿವಕುಮಾರ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ನೇಮಿಸಲಾಗಿದೆ.
ದಲಿತ, ಲಿಂಗಾಯತ, ಅಲ್ಪಸಂಖ್ಯಾತ ಸಮುದಾಯಕ್ಕೆ ಆದ್ಯತೆ ನೀಡುವ ನಿಟ್ಟಿನಲ್ಲಿ ಮೂವರು ಕಾರ್ಯಧ್ಯಕ್ಷರನ್ನು ನೇಮಿಸಲಾಗಿದ್ದು ಈಶ್ವರ್ ಖಂಡ್ರೆ, ಸತೀಶ್ ಜಾರಕಿಹೊಳಿ, ಸಲೀಂ ಅಹಮದ್ ಅವರು ಕಾರ್ಯಧ್ಯಕ್ಷರಾಗಿ ನೇಮಕಗೊಂಡಿದ್ದಾರೆ.
ಹಾಗೆಯೇ ವಿರೋಧ ಪಕ್ಷದ ನಾಯಕ ಹಾಗೂ ಶಾಸಕಾಂಗ ಪಕ್ಷದ ನಾಯಕರಾಗಿ ಸಿದ್ದರಾಮಯ್ಯ ಮುಂದುವರಿಯಲಿದ್ದಾರೆ.
ನಾರಾಯಣಸ್ವಾಮಿ ವಿಧಾನ ಪರಿಷತ್ಗೆ ಹಾಗೂ ವಿಧಾನಸಭೆಗೆ ಅಜಯ್ ಸಿಂಗ್ ಅವರನ್ನು ಮುಖ್ಯ ಸಚೇತಕರನ್ನಾಗಿ ನೇಮಕ ಮಾಡಲಾಗಿದೆ.
ಈ ಹಿಂದೆ ಕೆಪಿಸಿಸಿ ಅಧ್ಯಕ್ಷರಾಗಿದ್ದ ದಿನೇಶ್ ಗುಂಡೂರಾವ್ ಅವರು ಪಕ್ಷಕ್ಕೆ ನೀಡಿದ ಕೊಡುಗೆಯನ್ನು ಶ್ಲಾಘಿಸುತ್ತೇವೆ’ ಎಂದು ಎಐಸಿಸಿ ಪರವಾಗಿ ಮಾಧ್ಯಮಗಳಿಗೆ ಹೇಳಿಕೆ ಬಿಡುಗಡೆ ಮಾಡಿರುವ ಕಾಂಗ್ರೆಸ್ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಅವರ ಸಹಿ ಇರುವ ಪತ್ರ ಹೇಳಿದೆ.
ಕೆಪಿಸಿಸಿ ಅಧ್ಯಕ್ಷರಾಗಿ ನೇಮಕಾತಿ ಆದೇಶ ಹೊರಬಿದ್ದ ನಂತರ ಡಿ.ಕೆ.ಶಿವಕುಮಾರ್ ಅವರನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಇತರ ಶಾಸಕರು ವಿಧಾನಸೌಧದ ಮೊಗಸಾಲೆಯಲ್ಲಿ ಅಭಿನಂದಿಸಿದರು.