ನವದೆಹಲಿ, ಮಾ. 12 (Daijiworld News/MB) : ಕಾಂಗ್ರೆಸ್ನಿಂದ ಹೊರಬಂದು ಬಿಜೆಪಿಗೆ ಸೇರ್ಪಡೆಯಾಗಿರುವ ಜ್ಯೋತಿರಾಧಿತ್ಯ ಸಿಂಧಿಯಾ ಗುರುವಾರ ಹಲವು ಬಿಜೆಪಿಯ ಹಿರಿಯ ನಾಯಕರನ್ನು ಭೇಟಿ ಮಾಡಿದ್ದು ಈ ಕುರಿತಾಗಿ ಟ್ವೀಟ್ ಮಾಡಿರುವ ಗೃಹ ಸಚಿವ ಅಮಿತ್ ಶಾ ಅವರು , "ಸಿಂಧಿಯಾ ಅವರ ಆಗಮನದಿಂದ ಪಕ್ಷಕ್ಕೆ ಹೆಚ್ಚಿನ ಬಲ ಸಿಗುವ ವಿಶ್ವಾಸವಿದೆ" ಎಂದು ಹೇಳಿದ್ದಾರೆ.
ಸಿಂಧಿಯಾ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಸರಿಸುಮಾರು ಅರ್ಧಗಂಟೆಗಳಿಗೂ ಹೆಚ್ಚು ಕಾಲ ಮಾತುಕತೆ ನಡೆಸಿದ್ದಾರೆ.
ಅದಕ್ಕೂ ಮೊದಲು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾದ ಸಿಂಧಿಯಾ ಮಹತ್ವದ ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗಿದೆ.
ಸಿಂಧಿಯಾ ಬಿಜೆಪಿ ಪಕ್ಷ ಸೇರ್ಪಡೆಗೊಂಡ ಬಳಿಕ ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿದಂತೆ ಯಾವ ಹಿರಿಯ ನಾಯಕರೂ ಸ್ವಾಗತಿಸಿಲ್ಲ ಎಂಬ ಆರೋಪದ ಬಗ್ಗೆ ಟ್ವೀಟ್ ಮಾಡಿದ ಮಧ್ಯಪ್ರದೇಶ ಕಾಂಗ್ರೆಸ್ ಘಟಕ ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಟ್ವೀಟ್ ಮಾಡದಿರುವುದು ಮಹಾರಾಜರಿಗೆ ಮಾಡಿದ ಅವಮಾನ ಎಂದು ವ್ಯಂಗ್ಯ ಮಾಡಿತ್ತು.