ನವದೆಹಲಿ, ಮಾ.12 (DaijiworldNews/PY) : ಮಾರಣಾಂತಿಕಾ ಕೊರೊನಾ ವೈರಸ್ ಸೋಂಕು ಪತ್ತೆ ಪ್ರಕರಣ ದೇಶ ವ್ಯಾಪ್ತಿ ಹೆಚ್ಚುತ್ತಿರುವ ಬೆನ್ನಲ್ಲೇ ಪ್ರಧಾನಿ ಮೋದಿ ಅವರು ಮಹತ್ವದ ಘೋಷಣೆ ಮಾಡಿದ್ದಾರೆ.
ಈ ವಿಷಯವನ್ನು ಪ್ರಸ್ತಾಪಿಸಿದ ಪ್ರಧಾನಿ ಮೋದಿ ಅವರು, ಮುಂದಿನ ದಿನಗಳಲ್ಲಿ ಕೇಂದ್ರ ಸರ್ಕಾರದ ಯಾವುದೇ ಸಚಿವರು ವಿದೇಶ ಪ್ರವಾಸ ಮಾಡುವುದಿಲ್ಲ. ಕೊರೊನಾ ಸೋಂಕು ತಡೆಗಟ್ಟುವ ಸಲುವಾಗಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಪ್ರಧಾನಿ ಮೋದಿ ಅವರು ಹೋಳಿ ಮಿಲನ್ ಕಾರ್ಯಕ್ರಮದಿಂದ ಹಿಂದೆ ಸರಿದಿದ್ದು, ಕೊರೊನಾ ಭೀತಿಯಿಂದಾಗಿ ಅವರು ವಿದೇಶ ಪ್ರವಾಸವನ್ನು ರದ್ದುಗೊಳಿಸಿದ್ದಾರೆ.
ಪ್ರಧಾನಿ ಮೋದಿ ಅವರು ಯುರೋಪ್ನ ಬ್ರೂಸೆಲ್ಸ್ನಲ್ಲಿ ನಡೆಯಬೇಕಿದ್ದ ಯೂರೋಪಿನ್ ಯೂನಿಯನ್ನ ಶೃಂಗಸಭೆಯಲ್ಲಿ ಭಾಗವಹಿಸಬೇಕಿತ್ತು. ಆದರೆ, ಜಾಗತಿಕ ಕೊರೊನಾ ವೈರಸ್ ಸೋಂಕು ಸೃಷ್ಠಿಸಿರುವ ಭೀತಿಯಿಂದ ಪ್ರಧಾನಿ ಮೋದಿ ಅವರು ತಜ್ಞರ ಸಲಹೆ ಮೇರೆಗೆ ಶೃಂಗಸಭೆಯಲ್ಲಿ ಭಾಗವಹಿಸದಿರಲು ತೀರ್ಮಾನಿಸಿದ್ದರು.