ನವದೆಹಲಿ, ಮಾ.12 (DaijiworldNews/PY) : ಕೊರೊನಾ ವೈರಸ್ ದೇಶಾದ್ಯಂತ ಹರಡುತ್ತಿರುವ ಹಿನ್ನಲೆ ಮಾ.13ರಂದು ರಾಷ್ಟ್ರಪತಿ ಭವನ ಕಾರ್ಯನಿರ್ವಹಿಸುವುದಿಲ್ಲ ಎಂದು ರಾಷ್ಟ್ರಪತಿಯವರ ಅಧಿಕೃತ ಖಾತೆಯಿಂದ ಟ್ವೀಟ್ ಮಾಡಲಾಗಿದೆ.
ಮಹಾಮಾರಿ ಕೊರೊನಾ ವೈರಸ್ ಹರಡುತ್ತಿರುವ ಹಿನ್ನೆಲೆ ರಾಷ್ಟಪತಿ ಭವನ ಕಾರ್ಯ ಸ್ಥಗಿತಗೊಳಿಸಲಿದೆ ಎಂದು ಟ್ವೀಟರ್ನಲ್ಲಿ ಹೇಳಲಾಗಿದೆ.
ತಾತ್ಕಾಲಿಕವಾಗಿ ವಿದೇಶಿ ಪ್ರಯಾಣಿಕರ ಭೇಟಿಯನ್ನು ರದ್ದುಪಡಿಸಲಾಗಿದೆ ಎಂದು ತಿಳಿಸಲಾಗಿದೆ.