ಬೆಂಗಳೂರು, ಮಾ13 ( Daijiworld News/MSP): ರಾಜ್ಯಾದ್ಯಂತ ಕೊರೊನಾ ಸೋಂಕು ಪೀಡಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಮತ್ತು ರಾಜ್ಯದಲ್ಲಿ ಒಂದು ಸಾವು ಸಂಭವಿಸಿದ ಕಾರಣ ರಾಜ್ಯ ಸರಕಾರ ನಾಳೆಯಿಂದ ಒಂದು ವಾರಗಳ ಕಾಲ ರಾಜ್ಯಾದ್ಯಂತ ಶಾಪಿಂಗ್ ಮಾಲ್, ಮಲ್ಟಿಪ್ಲೆಕ್ಸ್, ಚಿತ್ರಮಂದಿರಗಳನ್ನು ಒಂದು ವಾರಗಳ ಕಾಲ ಮುಚ್ಚುವಂತೆ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ರಾಜ್ಯ ಸರ್ಕಾರದ ಈ ಆದೇಶದ ವಿರುದ್ದ ರಾಜ್ಯ ಕಾಂಗ್ರೆಸ್ ಕಿಡಿಕಾರಿದ್ದು , ಬಿಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಆಡಳಿತದ ರಾಜ್ಯ ಸರ್ಕಾರವೂ ಕೊರೊನಾ ವಿರುದ್ದ ಮುಂಜಾಗೃತ ಕ್ರಮ ಕೈಗೊಳ್ಳುವಲ್ಲಿ ಸಂಪೂರ್ಣ ವಿಫಲವಾಗಿದೆ ಎಂದು ಕಿಡಿಕಾರಿದೆ.
ಈ ಬಗ್ಗೆ ಟ್ವೀಟ್ ಮಾಡಿರುವಾ ಕಾಂಗ್ರೆಸ್ " ಆರೋಗ್ಯ ರಕ್ಷಣೆಗೆ ಅಗತ್ಯ ಮುಂಜಾಗೃತ ಕ್ರಮಕೈಗೊಳ್ಳುವಲ್ಲಿ ಸಂಪೂರ್ಣ ವಿಫಲವಾಗಿರುವ ಬಿ.ಎಸ್ ಯಡಿಯೂರಪ್ಪ ಸರ್ಕಾರ , ಕೊರೊನಾ ಹೆಸರಲ್ಲಿ ರಾಜ್ಯದಲ್ಲಿ ಒಂದು ವಾರ ಅನಧಿಕೃತ ತುರ್ತು ಪರಿಸ್ಥಿತಿಯನ್ನು ಘೋಷಿಸಿರುವುದು ಸರಿಯೇ? "ಎಂದು ಪ್ರಶ್ನಿಸಿದೆ.
ಮಾತ್ರವಲ್ಲದೆ ಜನರಲ್ಲಿ ಕೊರೊನಾ ಬಗ್ಗೆ ಭಯ ಹುಟ್ಟಿಸಿಬೇಡಿ. ಜಾಗೃತಿ ಮೂಡಿಸಿ. ಚಿಕಿತ್ಸಾ ಕೇಂದ್ರಗಳನ್ನು ಹೆಚ್ಚಿಸಿ ಎಂದು ಸಲಹೆ ನೀಡಿದೆ.