ನವದೆಹಲಿ, ಮಾ. 14 (Daijiworld News/MB) : ಕೊರೊನಾ ವೈರಸ್ನಿಂದಾಗಿ ದೆಹಲಿಯ 69 ವರ್ಷದ ವೃದ್ಧೆಯೊಬ್ಬರು ಮೃತಪಟ್ಟಿರುವುದು ದೃಢಪಟ್ಟಿದ್ದು, ಭಾರತದಲ್ಲಿ ಈ ಸೋಂಕಿನಿಂದಾಗಿ ಸಾವನ್ನಪ್ಪಿದವರ ಸಂಖ್ಯೆ 2ಕ್ಕೇರಿದೆ.
ನವದೆಹಲಿಯಲ್ಲಿ ಈವರೆಗೆ 6 ಪ್ರಕರಣಗಳು ದೃಢಪಟ್ಟಿದ್ದು ಆ ಪೈಕಿ ಮೃತಪಟ್ಟ 69 ವರ್ಷದ ವೃದ್ಧೆಗೆ ರಕ್ತದೊತ್ತಡ ಮತ್ತು ಮಧುಮೇಹದಿಂದ ಬಳಲುತ್ತಿದ್ದರು ಎಂದು ವರದಿ ತಿಳಿಸಿದೆ.
ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 81 ಕ್ಕೆ ಏರಿಕೆಯಾಗಿದೆ. ಈ ಪೈಕಿ ಮೂವರು ಗುಣಮುಖರಾಗಿದ್ದಾರೆ.