ಬೆಂಗಳೂರು, ಮಾ.15 (DaijiworldNews/PY) : ಕೊರೊನಾ ವೈರಸ್ ಹರಡದಂತೆ ಮುನ್ನೆಚ್ಚರಿಕಾ ಕ್ರಮವಾಗಿ 7,8,9ನೇ ತರಗತಿಯ ಪರೀಕ್ಷೆಗಳನ್ನು ಮಾ.31ರವರೆಗೆ ಮುಂದೂಡುವಂತೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ಧಾರೆ.
ಪರೀಕ್ಷೆಯ ಮುಂದಿನ ದಿನಾಂಕವನ್ನು ಪರಿಸ್ಥಿತಿಯನ್ನು ಅವಲೋಕಿಸಿ ಸೂಚಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ.
ಕೊರೊನಾ ವೈರಸ್ ಹೆಚ್ಚುತ್ತಿರುವ ಕಾರಣ, ಸರ್ಕಾರ ರಾಜ್ಯದ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ಆದೇಶಿಸಿತ್ತು. ಶಾಲೆಗೆ 6ನೇ ತರಗತಿಯ ವಿದ್ದಾರ್ಥಿಗಳು ಆಗಮಿಸಿಬೇಕಿಲ್ಲ. ಆದರೆ, ಪರೀಕ್ಷೆ ಬರೆಯಲು ಮಾತ್ರ ಉಳಿದ ವಿದ್ಯಾರ್ಥಿಗಳು ಹಾಜರಾಗಬೇಕು ಎಂದು ತಿಳಿಸಿತ್ತು. ಆದರೆ, ಈಗ 7,8 ಹಾಗೂ 9ನೇ ತರಗತಿಯ ವಿದ್ಯಾರ್ಥಿಗಳ ಪರೀಕ್ಷೆಯನ್ನು ಮುಂದೂಡಿದೆ.
ಪ್ರಸ್ತುತ ಆದೇಶದಂತೆ, 10 ಹಾಗೂ 12ನೇ ತರಗತಿಯ ವಿದ್ಯಾರ್ಥಿಗಳ ಪರೀಕ್ಷೆಗಳು ಯಥಾಸ್ಥಿತಿಯಂತೆ ನಡೆಯಲಿದೆ.