ಹೈದರಾಬಾದ್, ಮಾ.15 (DaijiworldNews/PY) : ಕೊರೊನಾ ವೈರಸ್ ವ್ಯಾಪಿಸುವುದನ್ನು ತಡೆಗಟ್ಟುವ ಸಲುವಾಗಿ ಮಾ.31ರವರೆಗೆ ರಾಜ್ಯದ ಎಲ್ಲಾ ಶಿಕ್ಷಣ ಸಂಸ್ಥೆಗಳನ್ನು ಮುಚ್ಚಲಾಗುವುದು ಎಂದು ತೆಲಂಗಾಣ ಮುಖ್ಯಮಂತ್ರಿ ಕೆ. ಚಂದ್ರಶೇಖರ್ ರಾವ್ ಅವರು ಹೇಳಿದ್ದಾರೆ.
ತೆಲಂಗಾಣದಲ್ಲಿ ಜನರು ಆತಂಕಗೊಳ್ಳಬಾರದು. ಇದಕ್ಕೂ ಮೊದಲು ಕೊರೊನಾ ವೈರಸ್ ಪತ್ತೆಯಾಗಿದ್ದ ವ್ಯಕ್ತಿಗೆ ಚಿಕಿತ್ಸೆ ನೀಡಲಾಗಿದ್ದು, ಅವರು ಗುಣಮುಖರಾಗಿದ್ದಾರೆ. ಎರಡನೇ ಪ್ರಕರಣ ಈಗ ವರದಿಯಾಗಿದೆ. ಸರ್ಕಾರಿ ಆಸ್ಪತ್ರೆಯ ಪ್ರತ್ಯೇಕ ವಾರ್ಡ್ನಲ್ಲಿರಿಸಿ ಆ ವ್ಯಕ್ತಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಜನರಿಗೆ ಈ ಸೋಂಕು ಸುಲಭವಾಗಿ ಹರಡಬಹುದು. ಹಾಗಾಗಿ ಸಾರ್ವಜನಿಕ ಸ್ಥಳಗಳಿಗೆ ಭೇಟಿ ನೀಡುವುದನ್ನು ಜನರು ಕಡಿಮೆ ಮಾಡಬೇಕು ಎಂದು ಹೇಳಿದರು.
ರಾಜ್ಯ ಸಚಿವ ಸಂಪುಟವು ಕೊರೊನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಕೆಲವು ಮಹತ್ವದ ತೀರ್ಮಾನಗಳನ್ನು ಕೈಗೊಂಡಿದೆ. 1,020 ಹಾಸಿಗೆಗಳ ಪ್ರತ್ಯೇಕ ವಾರ್ಡ್ಗಳು ತೆಲಂಗಾಣದಲ್ಲಿ ಸಿದ್ದವಾಗಿವೆ. ಕಾರ್ಯಪಡೆಯನ್ನು ಪ್ರಕರಣಗಳ ಮೇಲ್ವಿಚಾರಣೆಗಾಗಿ ರಚಿಸಲಾಗಿದೆ. ಮಾ.31ರವರೆಗೆ ಕೋಚಿಂಗ್ ಕೇಂದ್ರಗಳು ಸೇರಿದಂತೆ ರಾಜ್ಯದ ಎಲ್ಲಾ ಶಿಕ್ಷಣ ಸಂಸ್ಥೆಗಳನ್ನು ಮುಚ್ಚಲಾಗುವುದು ಎಂದು ತಿಳಿಸಿದ್ಧಾರೆ.