ಕಲಬುರಗಿ, ಮಾ.16 (Daijiworld News/MB) : ಕೊರೊನಾ ವೈರಸ್ ಹಬ್ಬುತ್ತಿರುವ ಹಿನ್ನಲೆಯಲ್ಲಿ ಕಲಬುರಗಿ ಜಿಲ್ಲೆಯಲ್ಲಿ ಸೆಕ್ಷನ್ 133 ಜಾರಿ ಮಾಡಲಾಗಿದೆ.
ಮುಂದಿನ ಆದೇಶದವರೆಗೆ ಜಿಲ್ಲಾದ್ಯಂತ ಸಂತೆ, ಜಾತ್ರೆ ಹಾಗೂ ಉರೂಸ್ಗೆ ನಿಷೇಧ ಹೇರಿ ಕಲಬುರಗಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.
ಹಾಗೆಯೇ ಕೊರೊನಾ ವೈರಸ್ ಭೀತಿ ಹಿನ್ನಲೆಯಿಂದಾಗಿ ಈ ಕ್ರಮತೆಗೆದುಕೊಳ್ಳಲಾಗಿದೆ ಎಂದು ಆದೇಶದಲ್ಲಿ ತಿಳಿಸಿದ್ದಾರೆ.
ಕೊರೊನಾದಿಂದಾಗಿ ದೇಶದಲ್ಲೇ ಮೊದಲ ಸಾವು ಕಲಬುರಗಿಯಲ್ಲಿ ಸಂಭವಿಸಿದೆ.