ಬೆಂಗಳೂರು, ಮಾ 16 ( Daijiworld News/MSP): ಭಾರತದಲ್ಲಿ ಕೊರೊನಾ ವೈರಸ್ ಭೀತಿ ಹೆಚ್ಚಾಗುತ್ತಿದ್ದು, ಕೊರೊನಾ ವೈರಸ್ ಅನ್ನು ರಾಷ್ಟ್ರೀಯ ವಿಪತ್ತು ಎಂದು ಪರಿಗಣಿಸಿರುವ ಕೇಂದ್ರ ಸರ್ಕಾರ ವೈರಸ್ ಹರಡಂತೆ ತಡೆಗಟ್ಟಲು ರಾಜ್ಯಕ್ಕೆ 84 ಕೋಟಿ ರೂ. ಹಣ ನೀಡಿದೆ ಎಂದು ಆರ್. ಅಶೋಕ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಆರ್. ಅಶೋಕ್ ಕೊರೊನಾ ವೈರಸ್ ನಿಯಂತ್ರಣಕ್ಕೆ ರಾಜ್ಯಕ್ಕೆ ಕೇಂದ್ರ ಸರ್ಕಾರ 84 ಕೋಟಿ ರೂ. ಹಣ ಬಿಡುಗಡೆ ಮಾಡಿದೆ. ಎಸ್ ಡಿಆರ್ ಎಫ್ ಮೀಸಲು ಹಣದಲ್ಲಿ ಶೇ. 25 ರಷ್ಟು ಹಣ ಬಳಸಲು ಕೇಂದ್ರ ಅನುಮತಿ ನೀಡಿದೆ ಎಂದರು. ಕರೋನಾ ಸೋಂಕು " ರಾಷ್ಟ್ರೀಯ ವಿಪತ್ತು" ಎಂದು ಘೋಷಿಸಿದ ಹಿನ್ನಲೆಯಲ್ಲಿ ಕೇಂದ್ರದ ಹಣ ಬಳಕೆಗೆ ಅನುಮತಿ ನೀಡಲಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರ ಜತೆ ಸಭೆ ನಡೆಸಿ ಹಣ ಬಳಕೆ ಕುರಿತು ಎಲ್ಲಾ ಜಿಲ್ಲಾಡಳಿತಗಳಿಗೆ ಸೂಚನೆ ನೀಡಲಾಗುವುದು"
ಈ ಹಣವನ್ನು ಕೊರೊನಾ ನಿಯಂತ್ರಣ ಕ್ಕೆ ಬೇಕಾದ ಔಷಧ, ಸ್ವಚ್ಚತೆ, ಸ್ಯಾನಿಟೇಷನ್, ಉಪಕರಣಗಳ ಖರೀದಿ, ಪೊಲೀಸ್ ಭದ್ರತೆ ಹಾಗೂ ಅಗ್ನಿಶಾಮಕ ಇಲಾಖೆಗೆ ಬಳಕೆ ಮಾಡುವಂತೆ ಕಂದಾಯ ಇಲಾಖೆಗೆ ಸರ್ಕಾರ ಸೂಚಿಸಬಹುದಾಗಿದೆ.