ಗುಜರಾತ್, ಮಾ.16 (Daijiworld News/MB) : ಬಿಜೆಪಿ ಭ್ರಷ್ಟಾಚಾರದಿಂದಾಗಿ ಕೋಟ್ಯಂತರ ರೂಪಾಯಿ ವ್ಯಯ ಮಾಡಿ ಕಾಂಗ್ರೆಸ್ ಶಾಸಕರನ್ನು ಖರೀದಿಸಲು ಪ್ರಯತ್ನ ಮಾಡುತ್ತಿದೆ. ಇದು ಪ್ರಜಾಪ್ರಭುತ್ವದ ಹತ್ಯೆ, ನಾವು ಇದಕ್ಕೆ ಅವಕಾಶ ನೀಡುವುದಿಲ್ಲ ಎಂದು ಗುಜರಾತ್ ಕಾಂಗ್ರೆಸ್ ಮುಖ್ಯಸ್ಥ ಅಮಿತ್ ಚಾವ್ಡಾ ತಿಳಿಸಿದ್ದಾರೆ.
ಈ ಕುರಿತು ಸೋಮವಾರ ಮಾಧ್ಯಮದೊಂದಿಗೆ ಮಾತನಾಡಿದ ಅವರು, "ರಾಜ್ಯದಲ್ಲಿರುವ ಎರಡು ಸ್ಥಾನಗಳಿಗೆ ನಡೆಯುವ ರಾಜ್ಯ ಸಭಾ ಚುನಾವಣೆಗೆ ಸಂಬಂಧಿಸಿದಂತೆ ನಾವು ಎರಡೂ ಸ್ಥಾನಗಳಿಗೂ ಸ್ಪರ್ಧಿಸುತ್ತೇವೆ" ಎಂದು ಹೇಳಿದರು.
ಈಗಾಗಲೇ ನಾಲ್ಕು ಮಂದಿ ಶಾಸಕರು ರಾಜೀನಾಮೆ ನೀಡಿದ್ದಾರೆ. ಈ ರಾಜೀನಾಮೆಯೂ ಅಂಗೀಕಾರವಾಗಿದೆ. ಇನ್ನು ಮತ್ತಷ್ಟು ಶಾಸಕರು ರಾಜೀನಾಮೆ ನೀಡಲಿದ್ದಾರೆ ಎಂದು ಉಪ ಮುಖ್ಯಮಂತ್ರಿ ನಿತಿನ್ ಪಟೇಲ್ ಹೇಳಿದ್ದಾರೆ. ಈ ಹೇಳಿಕೆ ಗುಜರಾತ್ ಕಾಂಗ್ರೆಸ್ನಲ್ಲಿ ಕೋಲಾಹಲಕ್ಕೆ ಕಾರಣವಾಗಿದೆ.