ಪಾಟ್ನಾ, ಮಾ.16 (DaijiworldNews/PY) : ಸರ್ಕಾರವೇ ಕೊರೊನಾ ವೈರಸ್ ಸೋಂಕಿತರ ಚಿಕಿತ್ಸೆಯನ್ನು ಭರಿಸಲಿದ್ದು, ಸೋಂಕಿನಿಂದ ಸಾವು ಸಂಭವಿಸಿದರೆ 4 ಲಕ್ಷ ಪರಿಹಾರ ನೀಡಲಾಗುವುದು ಎಂದು ಬಿಹರ ಸರ್ಕಾರ ಘೋಷಿಸಿದೆ.
ಸೋಮವಾರ ವಿಧಾನಸಭೆ ಅಧಿವೇಶನದಲ್ಲಿ ಈ ವಿಷಯವನ್ನು ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ತಿಳಿಸಿದರು. ಸರ್ಕಾರ ಮುಖ್ಯಮಂತ್ರಿ ಚಿಕಿತ್ಸಾ ಸಹಾಯತಾ ಕೋಶ್ ಯೋಜನೆಯ ಮೂಲಕ ಕೊರೊನಾ ವೈರಸ್ ಸೋಂಕಿಗೆ ಗುರಿಯಾಗುವವರ ಚಿಕಿತ್ಸಾ ವೆಚ್ಚವನ್ನು ಭರಿಸಲಿದೆ. ಮುಖ್ಯಮಂತ್ರಿ ಪರಿಹಾರ ನಿಧಿ’ಯಿಂದ ಈ ಕಾಯಿಲೆಯಿಂದ ಒಂದು ವೇಳೆ ಯಾವುದೇ ವ್ಯಕ್ತಿ ಮೃತಪಟ್ಟಿರೆ ಅವರ ಕುಟುಂಬಸ್ಥರಿಗೆ 4 ಲಕ್ಷ ಪರಿಹಾರ ನೀಡಲಾಗುವುದು ಎಂದು ತಿಳಿಸಿದರು.
ಬಿಹಾರವು ಕೊರೊನಾ ಸೋಂಕಿನಿಂದ ಮೃತಪಟ್ಟವರ ಕುಟುಂಬಸ್ಥರಿಗೆ ಪರಿಹಾರ ಘೋಷಿಸಿದ ಮೊದಲ ರಾಜ್ಯವಾಗಿದೆ. ಇದುವರೆಗೆ ದೇಶದಲ್ಲಿ ಕೊರೊನಾ ವೈರಸ್ನಿಂದ ಇಬ್ಬರು ಸಾವಿಗೀಡಾಗಿದ್ದಾರೆ. ಅದರಲ್ಲಿ ಒಬ್ಬರು ಕರ್ನಾಟಕದವರಾಗಿದ್ದಾರೆ.