ಬೆಂಗಳೂರು, ಮಾ.17 (Daijiworld News/MB) : ರಾಜ್ಯದಲ್ಲಿ ಮತ್ತಿಬ್ಬರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು ಸೋಂಕಿತರ ಸಂಖ್ಯೆ ಹತ್ತಕ್ಕೇರಿದೆ.
ಈ ಕುರಿತಾಗಿ ಟ್ವೀಟ್ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ ಶ್ರೀರಾಮುಲು ಮಾಡಿರುವ ಲಂಡನ್ ಪ್ರವಾಸದಿಂದ ಬೆಂಗಳೂರಿಗೆ ಹಿಂದಿರುಗಿದ 20 ವರ್ಷದ ಯುವತಿಗೆ ಹಾಗೂ ಗುಲ್ಬರ್ಗದಲ್ಲಿ 60 ವರ್ಷದ ವ್ಯಕ್ತಿಯೊಬ್ಬರಿಗೆ ಸೋಂಕು ದೃಢಪಟ್ಟಿದೆ ಎಂದು ತಿಳಿಸಿದ್ದಾರೆ.
ಹಾಗೆಯೇ ಗುಲ್ಬರ್ಗಾದಲ್ಲಿದ್ದ ವ್ಯಕ್ತಿಯು ಈ ಮೊದಲೇ, ಕಲಬುರುಗಿಯಲ್ಲಿ ಸೋಂಕಿನಿಂದ ಮೃತಪಟ್ಟ ವ್ಯಕ್ತಿಯ ಸಂಪರ್ಕದಲ್ಲಿದ್ದ ಎಂದು ತಿಳಿಸಿದ್ದು ಈ ಇಬ್ಬರನ್ನು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿಸಿದ್ದಾರೆ.
ಸೋಮವಾರ ಸಂಜೆ ವೇಳೆಗೆ ಬೆಂಗಳೂರು ಮೂಲದ 32 ವರ್ಷದ ಮತ್ತೊಬ್ಬ ಟೆಕ್ಕಿಗೆ ಕೊರೊನಾ ಸೋಂಕು ತಗುಲಿರುವುದು ದೃಢಫಟ್ತಿತ್ತು. ಬಳಿಕ ಸೋಮವಾರ ತಡರಾತ್ರಿ ಮತ್ತಿಬ್ಬರ ಕೊರೋನಾ ಸೋಂಕು ಪರೀಕ್ಷಾ ವರದಿ ಹೊರಬಿದ್ದಿದ್ದು, ಇಬ್ಬರಿಗೂ ಸೋಂಕು ತಗುಲಿರುವುದು ಸಾಬೀತಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಕೂಡ ಟ್ವೀಟ್ ಮಾಡಿದ್ದಾರೆ.