ಬೆಂಗಳೂರು, ಮಾ.17 (Daijiworld News/MB) : ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಮನೆಯಲ್ಲಿ ತಾಂತ್ರಿಕ ದೋಷದಿಂದಾಗಿ ಬೆಂಕಿ ಹೊತ್ತಿಕೊಂಡಿದ್ದು ಸಚಿವರು ಹಾಗೂ ಅವರ ಪತ್ನಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಗಾಂಧಿ ಭವನದ ಸಮೀಪ ಇರುವ ಸಚಿವರ ಸರ್ಕಾರಿ ನಿವಾಸದಲ್ಲಿ ಸಚಿವರು ಮಲಗುವ ಕೋಣೆಯ ಎಸಿ ಸ್ವಿಚ್ ಹಾಕಿದಾಗ ಎಸಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ತಕ್ಷಣ ಈಶ್ವರಪ್ಪ ಹಾಗೂ ಅವರ ಪತ್ನಿ ಮನೆಯಿಂದ ಹೊರ ಬಂದು ಅಳಿಯನಿಗೆ ವಿಷಯ ತಿಳಿಸಿದ್ದಾರೆ.
ಆ ಕೂಡಲೇ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿದ್ದು ಬೆಂಕಿ ನಂದಿಸಿದ್ದಾರೆ. ಆದರೆ ಬೆಡ್ರೂಮ್ ಸಂಪೂರ್ಣವಾಗಿ ಭಸ್ಮವಾಗಿದ್ದು ರೂಮ್ನಲ್ಲಿದ್ದ ರಾತ್ರಿಯಲ್ಲೇ ದುರಸ್ತಿ ಕಾರ್ಯ ನಡೆದಿದೆ ಎಂದು ವರದಿ ತಿಳಿಸಿದೆ.