ನವದೆಹಲಿ, ಮಾ 17(DaijiworldNews/SM): ಕೊರೊನಾ ವೈರಸ್ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಇದರ ನಿಯಂತ್ರಣಕ್ಕೆ ಕೇಂದ್ರ ಸರಕಾರ, ಆರೋಗ್ಯ ಇಲಾಖೆ ಸಾಕಷ್ಟು ಮುತುವರ್ಜಿ ವಹಿಸಿಕೊಂಡಿದೆ. ಆದರೆ, ಈ ನಡುವೆ ಮಹಾರಾಷ್ಟ್ರದಲ್ಲಿ ವೈರಸ್ ತೀವ್ರತೆ ಹೆಚ್ಚಾಗುತ್ತಿದ್ದು, ಈಗಾಗಲೇ ಸೋಂಕಿತರ ಸಂಖ್ಯೆ 41ಕ್ಕೆ ಏರಿಯಾಗಿದೆ.
ಈ ಮೂಲಕ ದೇಶದಲ್ಲೇ ಅತಿ ಹೆಚ್ಚು ಸೋಂಕು ಪೀಡಿತರು ಮಹಾರಾಷ್ಟ್ರದಲ್ಲಿದ್ದಾರೆ ಎಂಬುವುದು ಸ್ಪಷ್ಟಗೊಂಡಿದೆ. ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಪ್ರಕರಣಗಳು ಪತ್ತೆಯಾಗಿದ್ದು, ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ನಿಯಂತ್ರಣಕ್ಕೆ ಸರಕಾರ, ಆರೋಗ್ಯ ಇಲಾಖೆ ವಿವಿಧ ರೀತಿಯಲ್ಲಿ ಕ್ರಮಕೈಗೊಳ್ಳುತ್ತಿದೆ.
ಇನ್ನು ಈಗಾಗಲೇ ಮಾರಣಾಂತಿಕ ಕೊರೋನಾ ವೈರಸ್ ಗೆ ಭಾರತದಲ್ಲಿ ಮೂವರು ಜೀವಕಳೆದುಕೊಂಡಿದ್ದಾರೆ. ದೇಶದಲ್ಲಿ ಸೋಂಕಿತರ ಸಂಖ್ಯೆ 138ಕ್ಕೆ ಏರಿಕೆಯಾಗಿದೆ. ಮಹಾರಾಷ್ಟ್ರದಲ್ಲಿ 64 ವರ್ಷದ ಸೋಂಕು ಪೀಡಿತ ವ್ಯಕ್ತಿ ಮೃತಪಟ್ಟಿದ್ದಾರೆ. ಮುಂಬೈನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿ ಚಿಕಿತ್ಸೆಗೆ ಸ್ಪಂಧಿಸದೆ ಮೃತಪಟ್ಟಿದ್ದು, ಇಲಾಖೆ ಮತ್ತಷ್ಟು ನಿಗಾ ವಹಿಸಿಕೊಂಡಿದೆ.