ನವದೆಹಲಿ, ಮಾ.18 (Daijiworld News/MB) : ಕೊರೊನಾ ವೈರಸ್ ಎಲ್ಲೆಡೆ ಹಬ್ಬುತ್ತಿರುವ ಹಿನ್ನಲೆಯಲ್ಲಿ ಶಾಹೀನ್ಬಾಗ್ನ್ನು ತೆರವುಗೊಳಿಸುವಂತೆ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ ನಡೆಸುತ್ತಿರುವರಲ್ಲಿ ಪೊಲೀಸ್ ಅಧಿಕಾರಿಗಳು, ಆಗ್ನೇಯ ಜಿಲ್ಲಾಡಳಿತದ ಅಧಿಕಾರಿಗಳು ಮಂಗಳವಾರ ಮನವಿ ಮಾಡಿದ್ದಾರೆ.
ಕೊರೊನಾ ವೈರಸ್ ಸೋಂಕಿನ ಭೀತಿಯ ಹಿನ್ನಲೆಯಲ್ಲಿ ನವದೆಹಲಿಯಲ್ಲಿ ಮಾರ್ಚ್ ೩೧ ರವರೆಗೆ ಧಾರ್ಮಿಕ, ಕೌಟುಂಭಿಕ, ಸಾಮಾಜಿಕ, ರಾಜಕೀಯ ಹಾಗೂ ಸಾಂಸ್ಕೃತಿಕವಾದ ಯಾವುದೇ ಸಭೆಯಾಗಿದ್ದರೂ ಅದರಲ್ಲಿ 50 ಕ್ಕಿಂತಲೂ ಹೆಚ್ಚು ಜನರು ಸೇರುವುದಕ್ಕೆ ಅವಕಾಶವಿಲ್ಲ ಎಂದು ದೆಹಲಿ ಸರ್ಕಾರ ಘೋಷಿಸಿದ ಹಿನ್ನಲೆಯಲ್ಲಿ ಶಾಹೀನ್ಬಾಗ್ ಸಿಎಎ ವಿರೋಧಿ ಪ್ರತಿಭಟನಾಕಾರರಲ್ಲಿ ಶಾಹೀನ್ಬಾಗ್ನ್ನು ತೆರವುಗೊಳಿಸಲು ಹೇಳಲಾಗಿದೆ.
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಶಾಹೀನ್ಬಾಗ್ನಲ್ಲಿ ಡಿಸೆಂಬರ್ 15 ರಿಂದ ಪ್ರತಿಭಟನೆ ನಡೆಯುತ್ತಿದೆ.