ಬೆಂಗಳೂರು, ಮಾ.19 (Daijiworld News/MB) : ನಾನು ಕೊರೊನಾ ಪರೀಕ್ಷೆ ಮಾಡಿಸಿಲ್ಲ. ಅದು ದೇಹದ ಉಷ್ಣಾಂಶ ಪರೀಕ್ಷೆ ಅಷ್ಟೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮೂಲಕ ಸ್ಪಷ್ಟನೆ ನೀಡಿದ್ದಾರೆ.
ಕೆಲವು ಪತ್ರಿಕೆಗಳು ಸಿದ್ದರಾಮಯ್ಯನವರು ಕೊರೊನಾ ಸೋಂಕು ಪರೀಕ್ಷೆ ಮಾಡಿಸಿಕೊಂಡಿದ್ದಾರೆ ಎಂದು ವರದಿ ಮಾಡಿದ್ದು ಈ ಕುರಿತಾಗಿ ಸಿದ್ಧರಾಮಯ್ಯನವರು ಸ್ಪಷ್ಟನೆ ನೀಡಿದ್ದಾರೆ.
ಕೆಲವು ಪತ್ರಿಕೆಗಳ ವರದಿಯಂತೆ ನಾನು ಕೊರೊನಾ ಸೋಂಕು ಪರೀಕ್ಷೆ ಮಾಡಿಸಿಕೊಂಡಿಲ್ಲ. ಅದು ದೇಹದ ಉಷ್ಣಾಂಶ ಪರೀಕ್ಷೆ ಅಷ್ಟೆ. ಜ್ವರ, ಶೀತ, ಕೆಮ್ಮು ಇದ್ದವರು ತಕ್ಷಣ ವೈದ್ಯರ ಬಳಿ ಹೋಗಿ. ಅನುಮಾನ ಬಂದರೆ ಆರೋಗ್ಯ ಇಲಾಖೆ ಸಂಪರ್ಕಿಸಿ ಸರಿಯಾದ ಕ್ರಮದಲ್ಲಿ ಕೊರೊನಾ ಸೋಂಕಿನ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಟ್ವೀಟ್ ಮಾಡಿದ್ದಾರೆ.
ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 170ಕ್ಕೆ ಏರಿದ್ದು, ಕರ್ನಾಟಕದಲ್ಲಿ 15 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.