ತಿರುಪತಿ, ಮಾ.19 (DaijiworldNews/PY) : ದೇಶಾದ್ಯಂತ ಕೊರೊನಾ ಭೀತಿ ಹಿನ್ನೆಲೆ ತಿರುಪತಿ ದೇವಾಲಯ ಬಂದ್ಗೆ ಆಡಳಿತ ಮಂಡಳಿ ತೀರ್ಮಾನಿಸಿದೆ.
ಕೊರೊನಾ ಸೋಂಕು ವ್ಯಾಪಿಸದಂತೆ ಮುಂಜಾಗ್ರತಾ ಕ್ರಮವಾಗಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ ಎಂದು ಆಡಳಿತ ಮಂಡಳಿ ತಿಳಿಸಿರುವುದಾಗಿ ವರದಿಯಾಗಿದೆ.
ತಿರುಮಲ ದೇವಸ್ಥಾನದ ಕೆಲವು ಪೂಜಾ ಕಾರ್ಯಗಳನ್ನು ರದ್ದುಗೊಳಿಸಲು ನಿರ್ಧರಿಸಲಾಗಿದೆ. ದೈನಂದಿನ ಹಾಗೂ ವಾರದ ಕೆಲವು ಸಂಪ್ರದಾಯಗಳನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿ, ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಧಾರ್ಮಿಕ ಕಾರ್ಯಕ್ರಮದಲ್ಲಿ ಸೇರುವುದನ್ನು ತಪ್ಪಿಸಲು ಈ ನಿರ್ಧಾರ ಕೈಗೊಂಡಿರುವುದಾಗಿ ತಿರುಮಲ ತಿರುಪತಿ ದೇವಸ್ಥಾನ ಮಂಡಳಿ ಈ ಮೊದಲು ತಿಳಿಸಿತ್ತು.