ಭುವನೇಶ್ವರ, ಮಾ.20 (DaijiworldNews/PY) : ಕೊರೊನಾ ವೈರಸ್ ಭೀತಿ ಹಿನ್ನೆಲೆ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ದೇಶಾದ್ಯಂತ ಜನಗಣತಿಗೆ ಸಂಬಂಧಿಸಿದ ಚಟುವಟಿಕೆಗಳನ್ನು ಮುಂದೂಡುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬರೆದ ಪತ್ರದಲ್ಲಿ ತಿಳಿಸಿದ್ದಾರೆ.
ದೇಶಾದ್ಯಂತ ಜನಗಣತಿ ಹಾಗೂ ರಾಷ್ಟ್ರೀಯ ಜನಸಂಖ್ಯಾ ನೋಂದಣಿಯನ್ನು ನವೀಕರಿಸುವುದರಿಂದ ಕ್ಷೇತ್ರದ ಕಾರ್ಯಕರ್ತರು ಹಾಗೂ ಜನರಿಗೆ ಅಪಾಯವನ್ನು ತರುತ್ತದೆ ಎಂದು ಹೇಳಿದ್ದಾರೆ.
2020ರ ಎಪ್ರಿಲ್ 1ರಿಂದ ಸೆ.30ರವರೆಗೆ ಕೇಂದ್ರ ಗೃಹ ಸಚಿವಾಲಯವು ಜನಗಣತಿ 2021 ಮತ್ತು ದೇಶಾದ್ಯಂತ ಎನ್ಪಿಆರ್ ಅನ್ನು ನವೀಕರಿಸಲು ಅಧಿಸೂಚನೆಯನ್ನು ನೀಡಿದೆ ಎಂದು ತಿಳಿಸಿದ್ದಾರೆ.