ಮಂಗಳೂರು/ಬೆಂಗಳೂರು, ಮಾ21 ( Daijiworld News/MSP): ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟಲು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಜನತಾ ಕರ್ಫ್ಯೂ ಕರೆಗೆ ಕೇವಲ ರಾಷ್ಟ್ರದ ಜನತೆಯಷ್ಟೇ ಅಲ್ಲ, ಪಕ್ಷ ಭೇದ ಮರೆತ ವಿವಿಧ ರಾಜಕೀಯ ಪಕ್ಷಗಳ ನಾಯಕರೂ ಕೂಡ ಬೆಂಬಲ ನೀಡಲು ಮುಂದಾಗಿದ್ದಾರೆ.
ಮಾರ್ಚ್ 22 ರಂದು ಪ್ರಧಾನಿ ಮೋದಿಯವರು ಜನತಾ ಕರ್ಫ್ಯೂಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ನಾಯಕರು ಮಾರ್ಚ್.22ರಂದು ಇದ್ದ ತಮ್ಮೆಲ್ಲಾ ಕಾರ್ಯಕ್ರಮಗಳನ್ನು ರದ್ದು ಪಡಿಸಿದ್ದು, ಮನೆಯಲ್ಲಿಯೇ ಕಾಲ ಕಳೆಯಲು ನಿರ್ಧರಿಸಿದ್ದಾರೆಂದು ವರದಿಗಳು ತಿಳಿಸಿವೆ.
ಫ್ರಧಾನಮಂತ್ರಿಗಳ ನಿರ್ಧಾರವನ್ನು ಮಾಜಿ ಪ್ರಧಾನಿ ದೇವೇಗೌಡ ಅವರು ಸ್ವಾಗತಿಸಿದ್ದು, ರಾಜ್ಯದ ಜನತೆ ಬಳಿ ಮನವಿ ಮಾಡಿಕೊಂಡಿದ್ದಾರೆ. ಭಾನುವಾರ ಬೆಳಿಗ್ಗೆ 78 ಗಂಟೆಯಿಂದ ರಾತ್ರಿ 9 ಗಂಟೆಯವರೆಗೂ ಹೊರಗೆ ಬಾರದಂತೆ ಮನವಿ ಮಾಡಿಕೊಂಡಿದ್ದಾರೆ. ಅಲ್ಲದೆ, ಪ್ರಧಾನಮಂತ್ರಿಗಳ ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂದಿಗಳಿಗೆ ಧನ್ಯವಾದ ಹೇಳಿರುವ ಮೋದಿಯವರ ನಿರ್ಧಾರವನ್ನು ಕೊಂಡಾಡಿದ್ದಾರೆ.
ಇನ್ನು ಪ್ರಧಾನಿ ಕರೆ ನೀಡಿರುವ ಜನತಾ ಕರ್ಫ್ಯೂಗೆ ರಾಜ್ಯಾದಾದ್ಯಂತ ವ್ಯಾಪಕ ಬೆಂಬಲ ವ್ಯಕ್ತವಾಗಿದ್ದು, ಇಂದಿನಿಂದಲೇ ಇದರ ಪರಿಣಾಮ ಕಾಣಿಸಿಕೊಂಡಿದೆ. ಕರಾವಳಿ, ಬಿಡದಿ, ರಾಮನಗರ, ಚನ್ನಪಟ್ಟಣ, ಮದ್ದೂರು, ಕೊಡಗು, ಉಡುಪಿ ಮುಂತಾದ ಕಡೆ ಇಂದಿನಿಂದ ಜನ ಸಂಚಾರ ವಿರಳವಾಗಿದೆ