ತುಮಕೂರು, ಮಾ21 ( Daijiworld News/MSP): ತುಮಕೂರು ನಗರದ ರೈಲ್ವೆ ನಿಲ್ದಾಣದಲ್ಲಿ ಕೊವೀಡ್-19 ಮುಂಜಾಗ್ರತಾ ಕ್ರಮವಾಗಿ ಥರ್ಮಲ್ ಸ್ಕ್ಯಾನಿಂಗ್ ಮಾಡುವಲ್ಲಿ ಕರ್ತವ್ಯ ಲೋಪ ಹಾಗೂ ಉದಾಸೀನತೆ ತೋರಿದ ಆರೋಗ್ಯ ಇಲಾಖೆ ಸಿಬ್ಬಂದಿ ಎ. ನರಸಿಂಹಮೂರ್ತಿ ಇವರನ್ನು ಸೇವೆಯಿಂದ ಅಮಾನತ್ತು ಮಾಡಿ ಡಿ ಹೆಚ್ಒ ಚಂದ್ರಿಕಾ ಅವರು ಆದೇಶಿಸಿದ್ದಾರೆ.
ಎ. ನರಸಿಂಹಮೂರ್ತಿ, ಕಿರಿಯ ಪುರುಷ ಆರೋಗ್ಯ ಸಹಾಯಕ, ಜಿಲ್ಲಾ ರೋಗವಾಹಕ, ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಕಚೇರಿ, ತುಮಕೂರು ಇಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಶುಕ್ರವಾರ ತುಮಕೂರು ನಗರದ ರೈಲ್ವೆ ನಿಲ್ದಾಣದಲ್ಲಿ ಕೊವೀಡ್-19 ಮುಂಜಾಗ್ರತಾ ಕ್ರಮವಾಗಿ ಥರ್ಮಲ್ ಸ್ಕ್ಯಾನಿಂಗ್ ಮಾಡುವಲ್ಲಿ ಉದಾಸೀನತೆ ತೋರುತ್ತಿದ್ದ ದೃಶ್ಯ ಸಾಮಾಜಿಕ ಜಾಲಾತಾಣದಲ್ಲಿ ವೈರಲ್ ಆಗಿತ್ತು.