ನವದೆಹಲಿ, ಮಾ.21 (DaijiworldNews/PY) : ಕೇಂದ್ರ ಸರ್ಕಾರ ಸಣ್ಣ, ಮಧ್ಯಮ ಹಾಗೂ ಸೂಕ್ಷ್ಮ ಉದ್ದಿಮೆಗಳಿಗೆ ನೆರವು ನೀಡುವ ಕುರಿತು ಚಿಂತನೆ ನಡೆಸಿದ್ದು, ವಿಶೇಷವಾಗಿ ಸಾಲ ಮರು ಪಾವತಿಯನ್ನು ವಿಳಂಬ ಮಾಡುವುದರ ವಿಚಾರವಾಗಿ ಚಿಂತನೆ ನಡೆಸಿದೆ. ಶುಕ್ರವಾರ ನಡೆದ ಹಿರಿಯ ಅಧಿಕಾರಗಳ ಸಭೆಯಲ್ಲಿ ಈ ವಿಚಾರವಾಗಿ ಚರ್ಚಿಸಲಾಗಿದೆ. ವಿತ್ತ ಸಚಿವಾಲಯದ ಅಧಿಕಾರಿಗಳೊಂದಿಗೆ ಸೂಕ್ಷ್ಮ, ಸಣ್ಣ ಹಾಗೂ ಮಧ್ಯಮ ಪ್ರಮಾಣದ ಉದ್ದಿಮೆ ಖಾತೆ ಸಚಿವಾಲಯದ ಅಧಿಕಾರಿಗಳು ಮಾತುಕತೆ ನಡೆಸಿದ್ದಾರೆ.
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಾರಕ ಸೋಂಕಿನ ಹಿನ್ನೆಲೆಯಲ್ಲಿ ದೇಶದ ಸದ್ಯದ ಅರ್ಥ ವ್ಯವಸ್ಥೆಯ ಪರಿಶೀಲನೆಯನ್ನು ನಡೆಸಿದ್ಧಾರೆ. ಪಶುಸಂಗೋಪನೆ, ಪ್ರವಾಸೋದ್ಯಮ, ನಾಗರಿಕ ವಿಮಾನಯಾನ ಸಚಿವಾಲಯ, ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯೋಗ ಖಾತೆ ಸಚಿವಾಲಯಗಳ ಹಿರಿಯ ಅಧಿಕಾರಿಗಳು ಈ ಸಭೆಯಲ್ಲಿ ಪಾಲ್ಗೊಂಡಿದ್ದರು. ಶನಿವಾರ ಆತಂರಿಕವಾಗಿ ವಿತ್ತ ಸಚಿವಾಲಯ ಮತ್ತೊಂದು ಪರಿಶೀಲನಾ ಸಭೆ ನಡೆಸಲಿದೆ.