ಬೆಳಗಾವಿ, ಮಾ.21 (DaijiworldNews/PY) : "ಕೊರೊನಾ ಸೋಂಕು ಬಾಧಿತ ಪ್ರಕರಣಗಳು ಅತಿ ಹೆಚ್ಚಾಗಿ ಕಂಡುಬಂದ ಕಾರಣ ಜನರು ಮಹಾರಾಷ್ಟ್ರದಿಂದ ರಾಜ್ಯಕ್ಕೆ ಪ್ರವೇಶಿಸದಂತೆ ನಿರ್ಬಂಧ ವಿಧಿಸುವ ವಿಚಾರದ ಬಗ್ಗೆ ಸಿಎಂ ಜೊತೆ ಚರ್ಚಿಸಿ ಸೂಕ್ತವಾದ ತೀರ್ಮಾನ ಕೈಗೊಳ್ಳಲಾಗುವುದು" ಎಂದು ಆರೋಗ್ಯ ಇಲಾಖೆಯ ಸಚಿವ ಬಿ.ಶ್ರೀರಾಮುಲು ಹೇಳಿದರು.
ಈ ವಿಚಾರವನ್ನು ಸುದ್ದಿಗಾರರಿಗೂ ತಿಳಿಸಿದರು.
ಇದಕ್ಕೂ ಮುನ್ನ ನಗರದಲ್ಲಿ ನಡೆದ ಆರೋಗ್ಯ ಅಧಿಕಾರಿಗಳ ಸಭೆಯಲ್ಲಿ ವಿಧಾನಪರಿಷತ್ತಿನ ಸರ್ಕಾರದ ಮುಖ್ಯ ಸಚೇತಕರಾದ ಮಹಾಂತೇಶ ಕವಟಗಿಮಠ ಅವರು ಮಾತನಾಡಿ, "ಮುಂಜಾಗ್ರತಾ ಕ್ರಮವಾಗಿ ಒಂದು ವಾರದ ಮಟ್ಟಿಗೆ ಮಹಾರಾಷ್ಟ್ರದ ಜನರ ಪ್ರವೇಶವನ್ನು ನಿರ್ಬಂಧಿಸಲು ಉಭಯ ಸರ್ಕಾರಗಳ ಮಟ್ಟದಲ್ಲಿ ಕ್ರಮ ತೆಗೆದುಕೊಳ್ಳಬೇಕು" ಎಂದು ಮನವಿ ಮಾಡಿದರು.